ಹುಂಚ : ದಿನಾಂಕ 6-09-2022ರಂದು ಮಂಗಳವಾರ ಹುಂಚ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಕ್ರಮ ಒತ್ತುವರಿ ತೆರವು ನೆಪದಲ್ಲಿ ಬಡವರ ಜೀವನ ಜತೆ ಆಟವಾಡುತ್ತಿರುವ ಸರ್ಕಾರದ ವಿರುದ್ಧ ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಮತ್ತು ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ.
ಆಧಾರವಿಲ್ಲದೆ ಹುಂಚ ಗ್ರಾಪಂ ವ್ಯಾಪ್ತಿಯ ಹಡ್ಲುಬೈಲ್ ನಿವಾಸಿ ಜೀವನ್ ಅವರ ಮನೆ ನೆಲಸಮಗೊಳಿಸಿದ ಕಂದಾಯ ಅಧಿಕಾರಿಗಳ ವಿರುದ್ಧ ದಿನಾಂಕ 6-9-2022ರಂದು ಮಂಗಳವಾರ ಬೆಳಿಗ್ಗೆ 9ಗಂಟೆಗೆ ಸರಿಯಾಗಿ ಹಡ್ಲುಬೈಲ್ ಜೀವನ್ ಅವರ ಮನೆಯಿಂದ ಪಾದಯಾತ್ರೆ ಆರಂಭವಾಗಿ ಹುಂಚ ನಾಡ ಕಚೇರಿ ಎದುರು ಮಾಜಿ ಸಚಿವರು ಕೆಪಿಸಿಸಿ ವಕ್ತಾರರಾದ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಪ್ರತಿಭಟನೆಯಲ್ಲಿ ಹುಂಚಾ ಹೋಬಳಿಯ ಅಧಿಕಾರಿಗಳ ದೌರ್ಜನ್ಯಕ್ಕೆ ಒಳಗಾದ ಕುಟುಂಬಗಳು ಸಾರ್ವಜನಿಕರು ಸಮಾನ ಮನಸ್ಕರರು ಮಾಜಿ ಜಿಲ್ಲಾ ಪಂಚಾಯತ್ ತಾಲ್ಲೂಕು ಪಂಚಾಯತ್ ಎಪಿಎಂಸಿ ಸದಸ್ಯರುಗಳು ,ಗ್ರಾಮ ಪಂಚಾಯ್ತಿ ಅಧ್ಯಕ್ಷರು ಸದಸ್ಯರುಗಳು ,ಕಾಂಗ್ರೆಸ್ ಪಕ್ಷದ ಕಾರ್ಯಕರ್ತರುಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆ ಯಶಸ್ವಿ ಗೊಳಿಸಬೇಕೆಂದು ಕಿಮ್ಮನೆ ರತ್ನಾಕರ್ ಮನವಿ ಮಾಡಿದ್ದಾರೆ.