ಅಕೇಶಿಯಾ ನೆಡುತೋಪಿನಲ್ಲಿ ಅಕ್ರಮ ಮರ ಕಡಿತಲೆ : ಪ್ರಕರಣ ದಾಖಲು

ರಿಪ್ಪನ್ ಪೇಟೆ ; ಹುಂಚ ವ್ಯಾಪ್ತಿಯ ಮಳಲಿಕೊಪ್ಪ ಗ್ರಾಮದ ಸರ್ವೇ ನಂಬರ್ 04  ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಗಡಿಭಾಗವಾದ ಹುಂಚದಕಟ್ಟೆ ಗ್ರಾಮದ ಸರ್ವೇ ನಂಬರ್ 18 ರಲ್ಲಿ ಅಕ್ರಮವಾಗಿ ಅಕೇಶಿಯಾ ನೆಡುತೋಪಿನಲ್ಲಿ ಅಕೇಶಿಯಾ  ಮರಗಳನ್ನು ಕಡಿತಲೆ ಮಾಡಿ ಕಳ್ಳಸಾಗಾಣಿಕೆ ಮಾಡುತ್ತಿದ್ದ ಆರೋಪದ ಅಡಿಯಲ್ಲಿ ಅರಸಾಳು ವಲಯ ಅರಣ್ಯಾಧಿಕಾರಿಗಳು  ಇಬ್ಬರ ಮೇಲೆ ಅರಣ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.



ಹುಂಚದ ಕಟ್ಟೆ ಗ್ರಾಮದ ಕುಪುಟಹಳ್ಳಿ ನಿವಾಸಿಗಳಾದ ರಾಮಚಂದ್ರ ಹಾಗೂ ಮುದ್ದಪ್ಪ ಎಂಬುವರ ಮೇಲೆ ಅರಸಾಳು ವಲಯ ಅರಣ್ಯಾಧಿಕಾರಿ kfa 1963-u/s 33,50,62,80 ಮತ್ತು kfr 1969-u/s 144,165 ರ ಅಡಿಯಲ್ಲಿ  ಪ್ರಕರಣ ದಾಖಲಿಸಿಕೊಂಡು  ಅಕೇಶಿಯಾ ನಾಟಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.


ಗೊಂದಲದ ಗೂಡಾಗಿದ್ದ ಪ್ರಕರಣ :

ತೀರ್ಥಹಳ್ಳಿ ತಾಲ್ಲೂಕಿನ ಗಡಿಭಾಗದಲ್ಲಿ ನಡೆದ ಪ್ರಕರಣವಾಗಿದ್ದರಿಂದ ತೀರ್ಥಹಳ್ಳಿ, ಹೊಸನಗರ ಮತ್ತು ಅರಸಾಳು ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಕ್ಷೇತ್ರದ ಗೊಂದಲವುಂಟಾಗಿದರಿಂದ ಹಾಗೂ ಪ್ರಭಾವಿ ವ್ಯಕ್ತಿಗಳ ಕೈವಾಡವಿರುವ ಕಾರಣ ಕೇಸ್ ದಾಖಲಿಸಲು ಹಿಂದೇಟು ಹಾಕಿದ್ದರು ನಂತರ ವಿಷಯ ಎಲ್ಲೆಡೇ ಹಬ್ಬುತಿದ್ದಂತೆ ಎಚ್ಚೆತ್ತುಕೊಂಡ ಅರಣ್ಯ ಅಧಿಕಾರಿಗಳು ಕೇಸ್ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ….



ಒತ್ತುವರಿ ಕಾರಣಕ್ಕಾಗಿ ಎಂಪಿಎಂ ನಡುತೋಪಿನಲ್ಲಿ ಕಡಿತಲೆ ನಡೆಸಿ, ಅದನ್ನು ರಾಜಾರೋಷವಾಗಿ ಸಾಗಿಸುತ್ತಿದ್ರು, ಅರಣ್ಯ ಇಲಾಖೆ ಮೌನವೇ ಆಭರಣ ಎಂಬಂತ್ತಿತ್ತು.ಕಾಡು ರಕ್ಷಣೆಯ ಹೊಣೆ ತಮ್ಮದಲ್ಲದ ಕೆಲಸ ಅಂದುಕೊಂಡಿದ್ದರೇನೋ ದೊಡ್ಡ ಮಟ್ಟದ ಅಧಿಕಾರಿಗಳು, ಅಥವಾ ಜನವಸತಿ ಜಾಗವನ್ನು ಕಾಡಿನೊಳಕ್ಕೆ ಸೇರಿಸುವ ಆರ್ಥಿಕ ಯೋಜನೆಯಲ್ಲಿದ್ದಾರೋ ಏನೋ? ಆ ದೇವರೇ ಬಲ್ಲ …..

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 hour ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

1 hour ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

4 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

4 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

7 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

7 hours ago