ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ.
ಬೈಕ್ ಸವಾರನನ್ನು ಮಲೇಬೆನ್ನೂರು ನಿವಾಸಿ ಹಬೀಬುಲ್ಲಾ ಎಂದು ಗುರುತಿಸಲಾಗಿದೆ.
ಬೈಕ್ ಸವಾರನಿಗೆ ತೀವ್ರ ಪೆಟ್ಟು ಬಿದ್ದಿದ್ದು ಇವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಯನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.
ಅಪಘಾತದ ಸಿಸಿಟಿವಿ ದೃಶ್ಯಾವಳಿಯನ್ನು ಇಲ್ಲಿ ವೀಕ್ಷಿಸಿ👇