Breaking
13 Jan 2026, Tue

ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಪೋಷಣ್ ಅಭಿಯಾನ: ಚಂದ್ರಕಲಾ | ಗರ್ಭಿಣಿಯರು ಧನಾತ್ಮಕವಾಗಿ ಆಲೋಚಿಸಲಿ : ಉಬೇದುಲ್ಲಾ ಷರೀಫ್

ರಿಪ್ಪನ್‌ಪೇಟೆ: ಸಮಾಜದ ಪ್ರತಿಯೊಬ್ಬರು ಆರೋಗ್ಯವಾಗಿದ್ದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ. ಪ್ರಸ್ತುತ ಅಪೌಷ್ಠಿಕತೆಯಿಂದ ಬಳಲುತ್ತಿರುವ ಜನರನ್ನು ಅನಾರೋಗ್ಯ ಮುಕ್ತರನ್ನಾಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಉದ್ದೇಶದಿಂದ ಸರಕಾರ ಪೋಷಣ್ ಅಭಿಯಾನವನ್ನು ಜಾರಿಗೆ ತಂದಿಗೆ ಎಂದು ಹೊಸನಗರ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಚಂದ್ರಕಲಾ  ಹೇಳಿದರು.


     ಸಮೀಪದ ಮೂಗುಡ್ತಿ ಸಭಾಭವನದಲ್ಲಿ ಬುಧವಾರ ಗ್ರಾಮ ಪಂಚಾಯತಿ ಹೆದ್ದಾರಿಪುರ ಮತ್ತು ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶುಅಭಿವೃದ್ಧಿ ಯೋಜನೆಯ ವತಿಯಿಂದ ಗರ್ಭೀಣಿ ಮತ್ತು ಬಾಣಂತಿಯರಿಗಾಗಿ ಆಯೋಜಿಸಿದ್ದ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ ಅಪೌಷ್ಠಿಕ ಮುಕ್ತತೆಯನ್ನು ಮನಗೊಂಡಿರುವ ಸರಕಾರ ಪೋಷಣ್ ಅಭಿಯಾನ ಯೋಜನೆಯ ಮೂಲಕ ಮಹಿಳೆಯರಿಗೆ ವಿವಿಧ ಸೌವಲತ್ತುಗಳನ್ನು ನೀಡುತ್ತಿದೆ. ಹೆಣ್ಣು ಗರ್ಭವತಿಯಾದ ದಿನದಿಂದ ಒಂದು ಸಾವಿರ ದಿನಗಳವರೆಗೆ ಪಾಲನೆ ಮಾಡುವ ಉದ್ದೇಶ ಯೋಜನೆಯದ್ದಾಗಿದೆ. ಇಂತಹ ಸಮಯದಲ್ಲಿ ಸರಕಾರದ ಯೋಜನೆಯನ್ನು ಪಡೆದುಕೊಂಡು ಮನೆಯಲ್ಲಿಯೇ ಸಿಗುವ ಹಣ್ಣು-ತರಕಾರಿ ಸೊಪ್ಪು-ಮೊಳಕೆೆಕಾಳುಗಳ ಸೇವನೆಯಿಂದ ತಮ್ಮ ಆರೋಗ್ಯವನ್ನು ಸದೃಢಗೊಳಿಸಿಕೊಳ್ಳಬೇಕು ಇದರಿಂದ ಹುಟ್ಟಿದ ಮಗು ಆರೋಗ್ಯವಂತವಾಗಿದ್ದು, ಮುಂದೆ ಅದರಿಂದ ಜನನವಾಗುವ ಪೀಳಿಗೆಯು ಆರೋಗ್ಯ ಪೂರ್ಣವಾಗಿರುತ್ತದೆ ಎಂದರು. ಮಹಿಳೆಯರಿಗೆ ಫಲತಾಂಬೂಲಗಳ ಮೂಲಕ ಉಡಿತುಂಬಿದರು. ವಿವಿಧ ರೀತಿಯ ಪೌಷ್ಠಿಕ ಭಕ್ಷö್ಯ ಭೋಜನವನ್ನು ಉಣಬಡಿಸಿ ಸಾಂಪ್ರದಾಯಿಕ ಆರತಿ ಎತ್ತಿ ಶುಭಹಾರೈಸಿದರು.


   ಈ ಸಂದರ್ಭದಲ್ಲಿ ಸಿಡಿಪಿಓ ಶಶಿರೇಖಾ, ಗ್ರಾ.ಪಂ.ಅಧ್ಯಕ್ಷೆ ವನಿತಾ, ಉಪಾಧ್ಯಕ್ಷೆ ಲೀಲಾವತಿ, ಸದಸ್ಯರಾದ ವಿಶುಕುಮಾರ್, ಷಣ್ಮುಖ, ಚಂದ್ರಶೇಖರ, ಶೇಖರಪ್ಪ, ಮುಖಂಡರಾದ ಗುರುರಾಜಗೌಡ, ಆರೋಗ್ಯ ಇಲಾಖೆಯ ಗಾಯಿತ್ರಿ, ರಾಘವೇಂದ್ರ, ಅಂಗನವಾಡಿ ಕಾರ್ಯಕರ್ತರಾದ ಗಾಯಿತ್ರಿ, ಮಂಜಮ್ಮ ಮುಖಂಡರಾದ ಸುಧಾಕರ್ ಶೆಟ್ಟಿ, ಸತೀಶ್ ಭಟ್  ಇನ್ನಿತರರಿದ್ದರು.

ಕೆಂಚನಾಲ ಗ್ರಾಪಂ ಮಟ್ಟದ ಪೋಷಣಾ ಅಭಿಯಾನ : ಗರ್ಭಿಣಿಯರು ಧನಾತ್ಮಕವಾಗಿ ಆಲೋಚಿಸಲಿ : ಉಬೇದುಲ್ಲಾ ಷರೀಫ್


ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ತೊಳೆಮದ್ಲು ಗ್ರಾಮದಲ್ಲಿ  ಗ್ರಾಮ ಪಂಚಾಯತಿ ಕೆಂಚನಾಲ ಮತ್ತು ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನೆಯ ವತಿಯಿಂದ ಗರ್ಭೀಣಿ ಮತ್ತು ಬಾಣಂತಿಯರಿಗಾಗಿ ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು.


ಈ ಕಾರ್ಯಕ್ರಮದಲ್ಲಿ ಮಾತನಾಡಿದ  ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಗರ್ಭಿಣಿ ಹಾಗೂ ಬಾಣಂತಿಯರಿಗೆ ಸರ್ಕಾರದಿಂದ ಈ ಯೋಜನೆ ಅನುಷ್ಠಾನಗೊಳಿಸಿರುವುದು ಬಹಳ ಉಪಕಾರಿಯಾಗಿದೆ ಈ ಯೋಜನೆಯನ್ನು ಬಳಸಿಕೊಂಡು ಮನೆಯಲ್ಲಿಯೇ ಪೌಷ್ಟಿಕಯುಕ್ತ ಆಹಾರವನ್ನು ಸೇವಿಸುವುದರ ಮೂಲಕ ಆರೋಗ್ಯವನ್ನು ಕಾಪಾಡಿಕೊಂಡು ಮುಂದೆ ಜನನವಾಗುವ ಮಗುವಿನ ಆರೋಗ್ಯವನ್ನು ಸದೃಢಗೊಳಿಸುವುದು ಅವಶ್ಯಕವಾಗಿದೆ ಎಂದರು.


ಗರ್ಭಿಣಿಯರು ಧನಾತ್ಮಕವಾಗಿ, ಉತ್ತಮ ಆಲೋಚನೆ ಹೊಂದಬೇಕು. ಶಾಂತತೆಯಿಂದ ಧ್ಯಾನ, ಶ್ಲೋಕಗಳನ್ನು ಹೇಳಿಕೊಂಡಲ್ಲಿ ಜನಿಸುವ ಮಗುವಿನ ಮಾನಸಿಕ ಆರೋಗ್ಯ ಉತ್ತಮವಾಗಿರಲಿದೆ. ತಾಯಿಯ ಮನಸ್ಸು ಚಿಂತೆ, ದುಗುಡ, ದುಃಖ, ಹಿಂಸೆಯಿಂದ ಕೂಡಿದ್ದರೆ ಮಗುವಿನ ಮನಸ್ಥಿತಿಯೂ ಹಾಗೇ ಇರುತ್ತದೆ. ಆದ್ದರಿಂದ ಗರ್ಭಾವಸ್ಥೆಯಲ್ಲಿರುವಾಗ ತಾಯಂದಿರ ವಿಚಾರಧಾರೆ ಉತ್ತಮವಾಗಿರಬೇಕು ಎಂದು ಸಲಹೆ ನೀಡಿದರು.



ಈ ಸಂಧರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷರಾದ ಪುಟ್ಟಮ್ಮ ,ಸದಸ್ಯರಾದ ಮಹಮ್ಮದ್ ಷರೀಫ್,ಕೃಷ್ಣೋಜಿರಾವ್ , ಪರಮೇಶ್ , ಹೂವಮ್ಮ , ಗೌರಮ್ಮ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗರ್ಭಿಣಿಯರು ಹಾಗೂ ಬಾಣಂತಿಯರು ಇದ್ದರು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *

Exit mobile version