ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ :[KABBADDI]

ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು  ಕಬ್ಬಡ್ಡಿ ಪಂದ್ಯಾವಳಿಯಲ್ಲಿ  ಬಾಲಕಿಯರ ವಿಭಾಗದಲ್ಲಿ  ಪ್ರಥಮ ಸ್ಥಾನವನ್ನು  ಬಾಲಕರವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು  ಹಾಗೂ 400 ಮೀಟರ್ ಓಟದ ವಿಭಾಗದಲ್ಲಿ ದೀಕ್ಷಾ ಎಂಬ ವಿದ್ಯಾರ್ಥಿನಿ ದ್ವಿತೀಯ ಸ್ಥಾನವನ್ನು  ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಹೊಸನಗರ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.


ಶಿವಮೊಗ್ಗ ಜಿಲ್ಲೆಯ  ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ಪಡೆಯುವುದರ ಮೂಲಕ ಜಿಲ್ಲೆಯಲ್ಲಿ ಉನ್ನತ ಸ್ಥಾನವನ್ನು ಹೊಂದಿರುವ ಅಮೃತ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳು ಈಗ  ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ಕ್ರೀಡಾ ಚಟುವಟಿಕೆಗಳಲ್ಲಿ ಸೈ ಎನಿಸಿ ಕೊಳ್ಳುವುದರ  ಮೂಲಕ ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.


ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಗೃಹ ಸಚಿವ ಆರಗ ಜ್ಞಾನೇಂದ್ರ,.  ಕಾರ್ಯಾಧ್ಯಕ್ಷರಾದ ಟಿ. ಡಿ ಸೋಮಶೇಖರ.ಪ್ರಾಚಾರ್ಯ ಮಹಮ್ಮದ್ ನಜಹತ್ ಉಲ್ಲಾ. ಕಾಲೇಜು ಅಭಿವೃದ್ಧಿ ಸಮಿತಿಯವರು. ಉಪನ್ಯಾಸಕರು, ಸಿಬ್ಬಂದಿ ವರ್ಗದವರು, ಹಾಗೂ, ಗರತಿ ಕೆರೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

39 minutes ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

4 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

9 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

11 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

23 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

23 hours ago