ಶಿವಮೊಗ್ಗ: ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ತಾನು ಇವತ್ತು ರಾಜಿನಾಮೆ ನೀಡುತ್ತಿರುವುದಾಗಿ ಸೊರಬ ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದ ರಾಜು ತಲ್ಲೂರು ಘೋಷಿಸಿದ್ದಾರೆ.
ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಸಂಪೂರ್ಣ ನಿಷ್ಕ್ರಿಯ ರಾಗಿದ್ದಾರೆ. ಜಿಲ್ಲೆಯಲ್ಲಿ ಅವರಿಂದ ಪಕ್ಷ ಚೇತರಿಕೆ ಕಾಣದು. ವ್ಯಕ್ತಿಪೂಜೆಯಲ್ಲಿ ಅವರು ನಿರತರಾಗಿದ್ದಾರೆ. ಪಕ್ಷಕ್ಕೆ ಹೊಸ ಪದಾಧಿಕಾರಿಗಳನ್ನು ನೇಮಿಸಿಲ್ಲ ಎಂದು ಆರೋಪಿಸಿದರು.
ಜಿಲ್ಲಾ ಕಾಂಗ್ರೆಸಿನಲ್ಲಿ ಒಗ್ಗಟ್ಟಿಲ್ಲ. ಈ ಬಗ್ಗೆ ರಾಜ್ಯದ ಮುಖಂಡರಿಗೆ ಮಾಹಿತಿ ನೀಡಿದ್ದೆ. ಕೆಲಸ ಮಾಡಲು ಮನಸ್ಸಿಲ್ಲದವರು ಪಕ್ಷದಲ್ಲಿದ್ದಾರೆ. ಇದರಿಂದ ನಿಷ್ಕ್ರಿಯ ಪಕ್ಷದಲ್ಲಿರಬಾರದೆಂದು ತೀರ್ಮಾನಿಸಿ ಕಾಂಗ್ರೆಸ್ ತ್ಯಜಿಸುತ್ತಿರುವುದಾಗಿ ವಿವರಿಸಿದರು.
ಮುಂದೆ ಯಾವ ಪಕ್ಷವನ್ನು ಸೇರಬೇಕೆಂದು ಇನ್ನೆರಡು ದಿನದಲ್ಲಿ ನಿರ್ಧರಿಸುತ್ತೇನೆ. ತನ್ನ ಬೆಂಬಲಿಗರೊಂದಿಗೆ ಈಗಾಗಲೆ ಕಾಂಗ್ರೆಸ್ ಬಿಡುವ ಬಗ್ಗೆ ಮಾತನಾಡಿದ್ದೇನೆ. ಬಿಜೆಪಿ ಸೇರುವ ಬಗ್ಗೆ ತೀರ್ಮಾನಿಸಲಾಗುವುದು ಎಂದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್