ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.
ಭದ್ರಾವತಿ ನಗರದ ಉಂಬ್ಳೆಬೈಲು ರಸ್ತೆಯಲ್ಲಿ ಕೆಎಸ್ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ಆಂಜನೇಯ ಅಗ್ರಹಾರದ ಮೂರನೇ ತಿರುವಿನ ನಿವಾಸಿ ಲೋಕೇಶ್ ಎಂಬಾತನು ಬೈಕ್ ನಲ್ಲಿ ಹೋಗುತ್ತಿದ್ದಾಗ ನ್ಯೂಟೌನ್ ಪೊಲೀಸ್ ಠಾಣೆಯ ಸಮೀಪ ಕೆಎಸ್ ಆರ್ ಟಿ ಸಿ ಬಸ್ ಗೆ ಡಿಕ್ಕಿ ಹೊಡೆದಿದ್ದಾರೆ.
ಬೈಕ್ ಸವಾರ ರಸ್ತೆಗೆ ಬಿದ್ದು ತೀವ್ರವಾದ ರಕ್ತ ಸ್ರಾವವಾದ ಹಿನ್ನಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.