ತಾತ್ಕಾಲಿಕ ಮಿನಿ ಅಂಗನವಾಡಿ ಶೆಡ್ ತೆರವಿಗೆ ಮುಂದಾದ ಅರಣ್ಯಾಧಿಕಾರಿಗಳು : ಗ್ರಾಮಸ್ಥರಿಂದ ಪ್ರತಿಭಟನೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹೊಟ್ಯಾಳಪುರ ಗ್ರಾಮದ ಮಿನಿ ಅಂಗನವಾಡಿ ನಿರ್ಮಾಣಕ್ಕೆ ಅರಣ್ಯಾಧಿಕಾರಿಗಳು ಅಡ್ಡಗಾಲು ಹಾಕುತ್ತಿರುವ ಹಿನ್ನಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.

ಸುಮಾರು ಐದಾರು ವರ್ಷಗಳ ಹಿಂದೆ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಮಜರೆ ಹೊಟ್ಯಾಳಪುರ ಮಿನಿ ಅಂಗನವಾಡಿಯಲ್ಲಿ  ಮಗುವೊಂದಕ್ಕೆ ಹಾವು ಕಡಿದು ಸಾವನ್ನಪ್ಪಿರುವ ಘಟನೆ ನಡೆದಿತ್ತು.


ಈ ಘಟನೆ ಜನಮಾನಸದಿಂದ ಮಾಸುವ ಮುನ್ನವೇ ಸರ್ಕಾರದಿಂದ ಸುಸಜ್ಜಿತ ಮಿನಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿತ್ತು ಆದರೆ ಜಾಗ ಇಲ್ಲದೆ ಕಟ್ಟಡ ಕಟ್ಟುವುದಾದರೂ ಹೇಗೆ ಎಂಬ ಚಿಂತೆಯಲ್ಲಿದ್ದ ಗ್ರಾಮಸ್ಥರು ಮೂಗುಡ್ತಿ ವನ್ಯ ಜೀವಿ ವಲಯದ ಅರಣ್ಯ ಇಲಾಖೆಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.



ಸಂಬಂಧಪಟ್ಟ ಅಧಿಕಾರಿಗಳು ಏನೂ ಕ್ರಮ ಕೈಗೊಳ್ಳದೇ ಇದ್ದ ಕಾರಣ ನಿನ್ನೆಯ ದಿನ ಏಕಾಏಕಿ ಗ್ರಾಮಸ್ಥರು ತಾತ್ಕಾಲಿಕ  ಶೆಡ್ ನಿರ್ಮಿಸಿ ಇಂದು ಅಂಗನವಾಡಿಗೆ ಚಾಲನೆ ನೀಡಲಾಗಿತ್ತು.

ಇಂದು ಮೂಗೂಡ್ತಿ ವನ್ಯಜೀವಿ ವಿಭಾಗ ವಲಯ ಅರಣ್ಯಾಧಿಕಾರಿ ಆಫ಼್ರೀನ್ ನಾಜ್ ತಮ್ಮ ಸಿಬ್ಬಂದಿಗಳೊಂದಿಗೆ ತಾತ್ಕಾಲಿಕ ಅಂಗನವಾಡಿ ಶೆಡ್ ತೆರವುಗೊಳಿಸಲು ಮುಂದಾದಾಗ ಅರಸಾಳು ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಮಾಕರ ನೇತ್ರತ್ವದಲ್ಲಿ ಹೊಟ್ಯಾಳಪುರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಗ್ರಾಪಂ ಅಧ್ಯಕ್ಷ ಹಾಗೂ ಅರಣ್ಯಾಧಿಕಾರಿ ನಡುವೆ ಮಾತಿನ ಚಕಮಕಿ:


ತಾತ್ಕಾಲಿಕವಾಗಿ ಹೊಟ್ಯಾಳಪುರದಲ್ಲಿ ನಿರ್ಮಿಸಿದ್ದ ಮಿನಿ ಅಂಗನವಾಡಿ ಶೆಡ್ ನ್ನು ಏಕಾಏಕಿ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ತೆರವುಗೆ ಮುಂದಾದಾಗ ಆಕ್ರೋಶಗೊಂಡ ಅಧ್ಯಕ್ಷರು ತೆರವುಗೊಳಿಸುವುದನ್ನು ನಿಲ್ಲಿಸುವಂತೆ ಹೇಳಿದಾಗ ಅರಣ್ಯಾಧಿಕಾರಿಗಳೊಂದಿಗೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.

ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು : ಆಫ಼್ರೀನ್ ನಾಜ್

ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದ ವಲಯ ಅರಣ್ಯಾಧಿಕಾರಿ ಆಫ಼್ರೀನ್ ನಾಜ್ ರವರು ಮಿನಿ ಅಂಗನವಾಡಿ ಕಟ್ಟಡಕ್ಕೆ ಸ್ಥಳಾವಕಾಶ ನೀಡುವ ಬಗ್ಗೆ ಸಂಬಂಧಪಟ್ಟ ಸಿಡಿಪಿಓ ಮತ್ತು ಗ್ರಾಮ ಪಂಚಾಯ್ತಿ ಪಿಡಿಓರೊಂದಿಗೆ ಚರ್ಚಿಸಿ ಮೇಲಧಿಕಾರಿಗಳಿಗೆ ಪತ್ರ ಬರೆದು ಜಾಗ ನೀಡುವುದಾಗಿ ಭರವಸೆ ನೀಡಿ ಅಲ್ಲಿಯವರೆಗೆ ಆಂಗನವಾಡಿ ತೆರೆಯದಂತೆ ತಿಳಿಹೇಳಿದರು.



ಈ ಸಂಧರ್ಭದಲ್ಲಿ ಸ್ವಾಮಿ ನಾಯ್ಕ್,ಷಣ್ಮುಖ,ನಾಗಪ್ಪ,ಹೇಮಾವತಿ, ಕಮಲಾಕ್ಷಿ,ನಾಗಮ್ಮ,ಸುಜಾತ,ಪುಪ್ಪಾ,ದೇವಮ್ಮ,ಪಾರ್ವತಮ್ಮ,ಗಿರಿಜಮ್ಮ,ಲಕ್ಷö್ಮಮ್ಮ ,ಸರೋಜ,ದುರ್ಗಮ್ಮ,ಉಮಾಕಂತ,ಮಂಜುನಾಥ, ತುಳಸಿ,ಕುಮಾರ,ನಾಗರಾಜ,ಉಮೆಶಪ್ಪ,ರಾಜಪ್ಪ ಇನ್ನಿತರ ಹಲವು ಗ್ರಾಮಸ್ಥರು ಅಂಗನವಾಡಿ ಮಕ್ಕಳೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.



ಪ್ರತಿಭಟನಾ ಸ್ಥಳಕ್ಕೆ ಮೂಗುಡ್ತಿ ವನ್ಯಜೀವಿ ವಲಯ ಉಪವಲಯ ಅರಣ್ಯಾಧಿಕಾರಿಗಳಾದ ನದಾಫ್,ಸಂದೀಪ ಹಾಗೂ ಅರಣ್ಯ ರಕ್ಷಕ ಹೊಳೆಬಸಪ್ಪ ಇನ್ನಿತರ ಇಲಾಖೆ ಸಿಬ್ಬಂದಿವರ್ಗ ಭೇಟಿ ನೀಡಿದ್ದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago