ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು ಸ್ಮರಣೀಯರು. ಅವರು ದೇಶದ ಸ್ವಾಭಿಮಾನ, ಸಮಾನತೆ, ಸೋದರ ಭಾವನೆಗಳನ್ನು ಬೆಳೆಸುವ ಸನ್ಮಾರ್ಗಕ್ಕೆ ಬೆಳಕಾಗಿದ್ದರು ಎಂದು ಯುವ ಮುಖಂಡ ಅಭಿಷೇಕ್ ಹುಂಚ ಹೇಳಿದರು.
ಹುಂಚದಲ್ಲಿ(HUMCHA) ಇಂದು ಪಂಡಿತ್ ದೀನ್ ದಯಾಳ್ ಜೀ ಅವರ ಜನ್ಮದಿನಾಚರಣೆ ಆಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು ದೀನ್ ದಯಾಳ್ ಅಧಿಕಾರಕ್ಕಾಗಿ ಆಸೆ ಪಟ್ಟವರಲ್ಲ. ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸುವ ಕಳಕಳಿ ಹೊಂದಿದ್ದರು. ಸಮಾಜದಲ್ಲಿ ಮೇಲು-ಕೀಳು ಭಾವನೆ ದೂರವಾಗಬೇಕೆಂದು ಬಯಸಿದ್ದರು. ಸರಕಾರಿ ಯೋಜನೆಗಳು ಶ್ರೀಸಾಮಾನ್ಯರಿಗೆ ತಲುಪುತ್ತಿಲ್ಲ, ಬಡವರು ಸ್ವಯಂ ಪ್ರೇರಣೆಯಿಂದ ಬದುಕನ್ನು ಕಟ್ಟಿಕೊಳ್ಳಬೇಕು, ಕಷ್ಟ ಮತ್ತು ಸುಖಕ್ಕೆ ಒಲಿಯುವುದೇ ನಾಗರಿಕತೆ. ಯುವಜನತೆ ದುಶ್ಚಟಗಳ ದಾಸರಾಗುವುದರ ಬದಲು ಪರಂಪರೆಯ ಮೌಲ್ಯಗಳ ದಾಸರಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಆಶಾ ಯದುಕುಮಾರ್ ಪಂಡಿತ್ ದೀನ್ ದಯಾಳ್ ರವರ ಕಿರುಪರಿಚಯ ಮಾಡಿದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಯದು ಕುಮಾರ್ ಹೊಂಡಲಗದ್ದೆ, ಜಗದೀಶ್ ಹುಂಚ, ವೀರೇಶ್ ಆನೆಗದ್ದೆ, ನಾಗೇಶ್ ಕುಬಟಹಳ್ಳಿ,ಹರೀಶ್ ಹೊನ್ನೇಬೈಲು, ನಟೇಶ್ ಬಿಲ್ಲೇಶ್ವರ, ಸಂಜಯ್, ಶ್ರಿನಿವಾಸ್ ಹಾಗೂ ಪುಟಾಣಿ ಮಕ್ಕಳು ಹಾಜರಿದ್ದರು
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್