POSTMAN NEWS

ನೈಜ ಸುದ್ದಿ ನೇರ ಬಿತ್ತರ..

ದೇಶಾದ್ಯಂತ ಐದು ವರ್ಷ PFI ಮತ್ತು 8 ಅಂಗಸಂಸ್ಥೆಗಳನ್ನು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ :

ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡಿದೆ. ಕೇಂದ್ರ ಸರ್ಕಾರದ ಗೃಹ ಇಲಾಖೆ ಪಿಎಫ್‌ಐ ಸಂಘಟನೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐದು ವರ್ಷ ಬ್ಯಾನ್ ಮಾಡಿದೆ.

ಕಾನೂನು ಬಾಹಿರ ಸಂಘಟನೆ ಎಂದು PFI(ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳು ಅಥವಾ ರಂಗಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಬ್ಯಾನ್ ಮಾಡಲಾಗಿದೆ ಎಂದು ಸರ್ಕಾರ ಘೋಷಿಸಿದೆ.

ಇತ್ತೀಚೆಗಷ್ಟೇ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ಮಾಡಿದ್ದ ಎನ್‌ಐಎ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿತ್ತು. ಅಲ್ಲದೆ, ಸಂಘಟನೆಗೆ ಸೇರಿದ ಹಲವು ಮುಖಂಡರು, ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಪಿಎಫ್‌ಐಗೆ ಮತ್ತೊಂದು ಶಾಕ್ ನೀಡಲಾಗಿದ್ದು, ಐದು ವರ್ಷ ಬ್ಯಾನ್ ಮಾಡಲಾಗಿದೆ.


ಸ್ಟೂಡೆಂಟ್ ಇಸ್ಲಾಮಿಕ್ ಮೂವ್‍ಮೆಂಟ್ ಆಫ್ ಇಂಡಿಯಾ (ಸಿಮಿ), ಜಮಾತ್ ಉಲ್ ಮುಜಾಹಿದ್ದೀನ್ ಬಾಂಗ್ಲಾದೇಶ್ (ಜೆಎಂಬಿ) ಮತ್ತು ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಸಿರಿಯಾ (ಐಎಸ್‍ಐಎಸ್) ಸಂಘಟನೆಗಳ ಜತೆ ನಂಟು ಹೊಂದಿರುವ ಕಾರಣಕ್ಕೆ ಪಿಎಫ್‍ಐ ನಿಷೇಧಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಅಂಗಸಂಸ್ಥೆಗಳಾದ ರೆಹಾಬ್ ಇಂಡಿಯಾ ಫೌಂಡೇಶನ್ (Rehab India Foundation), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಷನ್ (NCHRO), ನ್ಯಾಷನಲ್ ವಿಮೆನ್ಸ್ ಫ್ರಂಟ್ (NWF), ಜೂನಿಯರ್ ಫ್ರಂಟ್ (JF), ಎಂಪವರ್ ಇಂಡಿಯಾ ಫೌಂಡೇಶನ್ (EIF) ಮತ್ತು ರಿಹಾಬ್ ಫೌಂಡೇಶನ್, ಕೇರಳ (EFRF) ನಿಷೇಧಿಸಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.