w
Headlines
Home » ದೇಶಾದ್ಯಂತ 100ಕ್ಕೂ ಹೆಚ್ಚು ಕಡೆ ಎನ್ ಐಎ(NIA) ದಾಳಿ : ಶಿವಮೊಗ್ಗದಲ್ಲಿಯೂ ಕೆಲ ಸಂಘಟನೆಯ ಮುಖಂಡರ ಮನೆ ಮೇಲೆ ದಾಳಿ

ದೇಶಾದ್ಯಂತ 100ಕ್ಕೂ ಹೆಚ್ಚು ಕಡೆ ಎನ್ ಐಎ(NIA) ದಾಳಿ : ಶಿವಮೊಗ್ಗದಲ್ಲಿಯೂ ಕೆಲ ಸಂಘಟನೆಯ ಮುಖಂಡರ ಮನೆ ಮೇಲೆ ದಾಳಿ

 ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಇವತ್ತು ಬೆಂಗಳೂರು, ಮಂಗಳೂರು ಮತ್ತು ಶಿವಮೊಗ್ಗ ಸೇರಿದಂತೆ ದೇಶಾದ್ಯಂತ 100ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ವಿವಿಧ ಸಂಘಟನೆಗೆ ಸೇರಿದ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದಲ್ಲಿ ಬೆಳಗಿನ ಜಾವ ಎನ್ ಐಎ(NIA) ದಾಳಿ ನಡೆದಿದೆ.

 ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಷ್ಕರ್ ಮೊಹಲ್ಲಾದ ಮನೆಯೊಂದರ ಮೇಲೆ ಬೆಳಗಿನ ಜಾವ ದಾಳಿಯಾಗಿದೆ. ಸಂಘಟನೆಯೊಂದರ ಮುಖಂಡನ್ನು ವಶಕ್ಕೆ ಪಡೆದು, ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

ಎರಡು ತಂಡವಾಗಿ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳು ಮನೆಯಲ್ಲಿ ಸುದೀರ್ಘ ವಿಚಾರಣೆ ನಡೆಸಿದ್ದಾರೆ. ರಾತ್ರಿ 2 ಗಂಟೆ ಹೊತ್ತಿಗೆ ಬಂದಿದ್ದ ಎನ್ಐಎ ಅಧಿಕಾರಿಗಳು ಬೆಳಗಿನ ಜಾವ 5 ಗಂಟೆವರೆಗೆ ವಿಚಾರಣೆ ನಡೆಸಿದ್ದಾರೆ. ಅಲ್ಲದೆ ಮನೆಯಲ್ಲಿ ಶೋಧ ಕಾರ್ಯ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.