ನವೆಂಬರ್ ಅಂತ್ಯಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ

ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ವಿಮಾನ ನಿಲ್ದಾಣದ ರನ್‌ವೇ, ಟರ್ಮಿನಲ್ ಕಟ್ಟಡ, ವಿಮಾನಸಂಚಾರ ನಿಯಂತ್ರಣ ಘಟಕ ಸೇರಿದಂತೆ ಅನೇಕ ಕಾಮಗಾರಿಗಳು ಭರದಿಂದ ಸಾಗಿದ್ದು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಅಂತಿಮ ಹಂತದ ಕಾಮಗಾರಿ ಪ್ರಗತಿಯಲ್ಲಿದೆ.ಈ ಎಲ್ಲಾ ಕಾಮಗಾರಿಗಳು ನವೆಂಬರ್ ಮಾಸಾಂತ್ಯಕ್ಕೆ ಪೂರ್ಣಗೊಂಡು ವಿಮಾನ ನಿಲ್ಧಾಣ ಲೋಕಾರ್ಪಣೆಗೆ ಸರ್ವಸನ್ನದ್ಧಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.

ಅವರು ಇಂದು ಸೋಗಾನೆ ವಿಮಾನ ನಿಲ್ದಾಣಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಅಪರ ಕಾರ್ಯದರ್ಶಿ ಶ್ರೀಮತಿ ಉಷಾಪಾಧಿ, ಗೌರವಗುಪ್ತಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಸೇರಿದಂತೆ ರಾಷ್ಟ್ರ ಮತ್ತು ರಾಜ್ಯ ಮಟ್ಟದ ತಂತ್ರಜ್ಞರು, ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮದ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು. ಯಾವುದೇ ಒಂದು ರಾಜ್ಯ, ಜಿಲ್ಲೆ, ಸಂಸ್ಥೆ ಅಥವಾ ವ್ಯವಸ್ಥೆ ನಿರೀಕ್ಷಿತ ಪ್ರಗತಿ ಸಾಧಿಸಲು ಮೂಲಭೂತ ಸೌಕರ್ಯಗಳು ಇರಬೇಕಾದುದು ಅಗತ್ಯ. ಬಹುದಿನಗಳ ಈ ಕನಸಿನ ಯೋಜನೆಯ ಅನುಷ್ಠಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸತತ ಪರಿಶ್ರಮ, ಸಂಕಲ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಹಕಾರವೂ ಕೂಡ ಸ್ಮರಣೀಯವಾದುದು ಎಂದರು.

ವಿಮಾನ ನಿಲ್ದಾಣದ ವ್ಯವಸ್ಥಿತ ನಿರ್ವಹಣೆ, ಸಂಚಾರ ಸಂಪರ್ಕ ಮತ್ತು ಉಸ್ತುವಾರಿ ಕಾರ್ಯಗಳ ಕುರಿತು ಗಮನಹರಿಸಬೇಕಾದ ಅಗತ್ಯವಿದೆ. ನಿಲ್ದಾಣದ ನಿರ್ವಹಣೆ ಕುರಿತು ಉನ್ನತ ಮಟ್ಟದ ಅಧಿಕಾರಿಗಳು ಸಭೆ ಸೇರಿ ನಿರ್ಣಯ ಕೈಗೊಂಡು ಮುಂದಿನ ಕ್ರಮಗಳಿಗೆ ಅನುವು ಮಾಡಿಕೊಡುವಂತೆ ಗೌರವಗುಪ್ತಾ ಅವರಿಗೆ ಮನವಿ ಮಾಡಿದ ಅವರು, ನಿಲ್ದಾಣದ ಉದ್ಘಾಟನೆಗೆ ಜನವರಿ ಮಾಸಾಂತ್ಯದೊಳಗಾಗಿ ಪ್ರಧಾನಮಂತ್ರಿ ಅವರ ಸಮಯವನ್ನು ನಿಗಧಿಗೊಳಿಸಿಕೊಡುವಂತೆ ರಾಜ್ಯ ಸರ್ಕಾರದ ವತಿಯಿಂದ ಕೋರಲಾಗುವುದು ಎಂದರು.

ಶಿವಮೊಗ್ಗ-ಬೆಂಗಳೂರು ಅಲ್ಲದೇ ನೆರೆ ರಾಜ್ಯಗಳ ಹಲವು ಪ್ರಮುಖ ನಗರಗಳ ಸಂಪರ್ಕ ಹಾಗೂ ಸಂಚಾರಕ್ಕೆ ಕ್ರಮ ವಹಿಸುವಂತೆ ವಿಮಾನಯಾನ ಸಂಸ್ಥೆಗಳಿಗೆ ಮನವಿ ಮಾಡಲಾಗಿದೆ. ಅಲ್ಲದೇ ರಾಜ್ಯದ ಉನ್ನತ ಅಧಿಕಾರಿಗಳ ತಂಡ ಸದ್ಯದಲ್ಲಿ ನೆರೆಯ ರಾಜ್ಯ ಮಹಾರಾಷ್ಟ್ರದ ಶಿರಡಿ ವಿಮಾನ ನಿಲ್ದಾಣಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಮತ್ತು ನಿರ್ವಹಣೆಯ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದೆ ಎಂದರು.

ಈ ಸಂದರ್ಭದಲ್ಲಿ ಬ್ರಿಗೇಡಿಯರ್ ಪೂರ್ವಿಮಠ್, ರಾಜೀವ್‌ಕುಮಾರ್ ರೈ, ಹೆಪ್ಸಿಬಾರಾಣಿ ಕೊರ್ಲಪಾಟಿ, ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಹೆಚ್.ಆರ್.ರಾಜಪ್ಪ, ರೈಟ್ಸ್ ಸಂಸ್ಥೆಯ ಇಂಜಿನಿಯರ್ ರವಿ, ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಕೃಷ್ಣಪ್ರಸಾದ್, ಲೋಕೋಪಯೋಗಿ ಇಲಾಖೆಯ ಅಭಿಯಂತರರಾದ ಕಾಂತರಾಜ್, ಸಂಪತ್‌ಕುಮಾರ್ ಮುಂತಾದ ಅಧಿಕಾರಿಗಳು ಹಾಗೂ ವಿಮಾನಯಾನ ಸಂಸ್ಥೆಯ ತಂತ್ರಜ್ಞರು, ಗುತ್ತಿಗೆದಾರರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago