POSTMAN NEWS

ನೈಜ ಸುದ್ದಿ ನೇರ ಬಿತ್ತರ..

ನಾರಾಯಣ ಗುರು ವಿಚಾರ ವೇದಿಕೆ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಪುನೀತ್ ಬೆಳ್ಳೂರು ನೇಮಕ :

ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಶಿವಮೊಗ್ಗ ಜಿಲ್ಲಾ ಸಂಘಟನ ಕಾರ್ಯದರ್ಶಿಯಾಗಿ ಪತ್ರಕರ್ತ ಪುನೀತ್ ಬೆಳ್ಳೂರು ಅವರನ್ನ ಆಯ್ಕೆ ಮಾಡಿ   ರಾಜ್ಯ ಅಧ್ಯಕ್ಷರಾದ ಸತ್ಯಜಿತ್‌ ಸುರತ್ಕಲ್ ಅದೇಶ ಹೊರಡಿಸಿದ್ದಾರೆ.

ನೂತನ ಹುದ್ದೆ ಅಲಂಕರಿಸಿದ ಪುನೀತ್ ಬೆಳ್ಳೂರು ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿ ಸಂಘಟನೆಯು ನನಗೆ ಅತ್ಯಂತ ಜವಾಬ್ದಾರಿ ಹುದ್ದೆಯನ್ನ ನೀಡಿದೆ,ಹಾಗೂ ನನ್ನನ್ನು ಗುರುತಿಸಿದ ಶಿವಮೊಗ್ಗ ಜಿಲ್ಲಾ ಸಮಿತಿಗೆ ನಾನು ಧನ್ಯವಾದ ತಿಳಿಸುತ್ತೇನೆ,ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಈಗಾಗಲೇ ಹಲವು ಸಮಾಜ ಮುಖಿ ಕೆಲಸ ಮಾಡುತ್ತ ಬಂದಿದೆ,ಸಮಾಜದವರಿಗೆ ಅಲ್ಲದೇ ಪ್ರತಿ ಹೋಬಳಿ ಮಟ್ಟದಲ್ಲಿ ಪ್ರತಿಯೊಬ್ಬರಿಗೂ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ,ರಕ್ತದಾನ ಶಿಬಿರ ,ವಿದ್ಯಾರ್ಥಿಗಳು ಹಾಗೂ ರೈತರಿಗೆ ಅನುಕೂಲ  ದೃಷ್ಟಿಯಿಂದ ಸರ್ಕಾರದಿಂದ ಬರುವ ಸೌಲಭ್ಯಗಳ ಮಾಹಿತಿ ತತ್ಕ್ಷಣ ನೀಡುತ್ತಿದೆ, ಇದೊಂದು ವಿಭಿನ್ನ ಪ್ರಯತ್ನ ,ಸಂಘಟನೆ ಬಹಳ  ಸ್ಪಂದನೆ ಮಾಡುತ್ತಿದೆ,ಈಗ ನನಗೆ ಒಂದು ಜವಾಬ್ದಾರಿ ಸ್ಥಾನ ಕೊಟ್ಟಿದೆ ನಾನು ಪ್ರತಿಯೊಬ್ಬರಿಗೂ ಸ್ಪಂದನೆ ಮಾಡುತ್ತೇನೆ,ಸಂಘಟನೆ ನೀಡಿದ ಜವಾಬ್ದಾರಿ ನಿರ್ವಹಿಸಿ ಸಂಘಟನೆ ಕಟ್ಟಲು  ನಾನು ಶ್ರಮಿಸುತ್ತೇನೆ ಎಂದರು,

 ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯ ಕಾರ್ಯಧ್ಯಕ್ಷ ರಾಘವೇಂದ್ರ ಮುಡುಬ,ಜಿಲ್ಲಾಧ್ಯಕ್ಷ ಪ್ರವೀಣ್ ಇಡಗೋಡು,ಹೊದಲ ಶಿವು, ಸೇರಿದಂತೆ ಕಾರ್ಯಕರ್ತರು ನೂತನ ಸಂಘಟನಾ ಕಾರ್ಯದರ್ಶಿ ಪುನೀತ್ ಬೆಳ್ಳೂರು ರವರಿಗೆ ಅಭಿನಂದನೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.