ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಶಿವಮೊಗ್ಗ ಜಿಲ್ಲಾ ಸಂಘಟನ ಕಾರ್ಯದರ್ಶಿಯಾಗಿ ಪತ್ರಕರ್ತ ಪುನೀತ್ ಬೆಳ್ಳೂರು ಅವರನ್ನ ಆಯ್ಕೆ ಮಾಡಿ ರಾಜ್ಯ ಅಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ಅದೇಶ ಹೊರಡಿಸಿದ್ದಾರೆ.
ನೂತನ ಹುದ್ದೆ ಅಲಂಕರಿಸಿದ ಪುನೀತ್ ಬೆಳ್ಳೂರು ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿ ಸಂಘಟನೆಯು ನನಗೆ ಅತ್ಯಂತ ಜವಾಬ್ದಾರಿ ಹುದ್ದೆಯನ್ನ ನೀಡಿದೆ,ಹಾಗೂ ನನ್ನನ್ನು ಗುರುತಿಸಿದ ಶಿವಮೊಗ್ಗ ಜಿಲ್ಲಾ ಸಮಿತಿಗೆ ನಾನು ಧನ್ಯವಾದ ತಿಳಿಸುತ್ತೇನೆ,ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಈಗಾಗಲೇ ಹಲವು ಸಮಾಜ ಮುಖಿ ಕೆಲಸ ಮಾಡುತ್ತ ಬಂದಿದೆ,ಸಮಾಜದವರಿಗೆ ಅಲ್ಲದೇ ಪ್ರತಿ ಹೋಬಳಿ ಮಟ್ಟದಲ್ಲಿ ಪ್ರತಿಯೊಬ್ಬರಿಗೂ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ,ರಕ್ತದಾನ ಶಿಬಿರ ,ವಿದ್ಯಾರ್ಥಿಗಳು ಹಾಗೂ ರೈತರಿಗೆ ಅನುಕೂಲ ದೃಷ್ಟಿಯಿಂದ ಸರ್ಕಾರದಿಂದ ಬರುವ ಸೌಲಭ್ಯಗಳ ಮಾಹಿತಿ ತತ್ಕ್ಷಣ ನೀಡುತ್ತಿದೆ, ಇದೊಂದು ವಿಭಿನ್ನ ಪ್ರಯತ್ನ ,ಸಂಘಟನೆ ಬಹಳ ಸ್ಪಂದನೆ ಮಾಡುತ್ತಿದೆ,ಈಗ ನನಗೆ ಒಂದು ಜವಾಬ್ದಾರಿ ಸ್ಥಾನ ಕೊಟ್ಟಿದೆ ನಾನು ಪ್ರತಿಯೊಬ್ಬರಿಗೂ ಸ್ಪಂದನೆ ಮಾಡುತ್ತೇನೆ,ಸಂಘಟನೆ ನೀಡಿದ ಜವಾಬ್ದಾರಿ ನಿರ್ವಹಿಸಿ ಸಂಘಟನೆ ಕಟ್ಟಲು ನಾನು ಶ್ರಮಿಸುತ್ತೇನೆ ಎಂದರು,
ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯ ಕಾರ್ಯಧ್ಯಕ್ಷ ರಾಘವೇಂದ್ರ ಮುಡುಬ,ಜಿಲ್ಲಾಧ್ಯಕ್ಷ ಪ್ರವೀಣ್ ಇಡಗೋಡು,ಹೊದಲ ಶಿವು, ಸೇರಿದಂತೆ ಕಾರ್ಯಕರ್ತರು ನೂತನ ಸಂಘಟನಾ ಕಾರ್ಯದರ್ಶಿ ಪುನೀತ್ ಬೆಳ್ಳೂರು ರವರಿಗೆ ಅಭಿನಂದನೆ ತಿಳಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್