ನಾಳೆ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ : ಪೊಲೀಸ್ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ …??

ರಿಪ್ಪನ್‌ಪೇಟೆ : ಪಟ್ಟಣದ ತಿಲಕ್ ಮಂಟಪದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ವತಿಯಿಂದ ಪ್ರತಿಷ್ಠಾಪಿಸಿದ್ದ 55 ನೇ ವರ್ಷದ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ ನಾಳೆ(10-09-2022) ನಡೆಯಲಿದೆ. ಮಧ್ಯಾಹ್ನ 12.30 ಕ್ಕೆ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದೆ.ಈ ಬಾರಿ ಅದ್ದೂರಿ ಮೆರವಣಿಗೆಗೆ ಸಿದ್ದತೆ ನಡೆಸಲಾಗಿದೆ.

ಕೊರೊನಾ ಹಿನ್ನಲೆಯಲ್ಲಿ ಕಳೆದ ಎರಡು ವರ್ಷ ಅದ್ದೂರಿ ಮೆರವಣಿಗೆ ನಡೆದಿರಲಿಲ್ಲ ನಾಳೆ ನಡೆಯುವ ಅದ್ದೂರಿ ಮೆರವಣಿಗೆಯಲ್ಲಿ ಕಲಾ ತಂಡಗಳು,ಮಂಗಳವಾದ್ಯ,ಚಂಡೇಮೇಳ ,ಡೊಳ್ಳು ಕುಣಿತ ,ಕಹಳೆ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ಮೆರವಣಿಗೆಗೆ ರಂಗು ತರಲಿದೆ ಎಂದು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿ ಅಧ್ಯಕ್ಷ ವೈ ಜೆ ಕೃಷ್ಣ ಮತ್ತು ಕಾರ್ಯದರ್ಶಿ ಪಿ ಸುಧೀರ್ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೃಹತ್  ಬೈಕ್ ರ್‍ಯಾಲಿ

ನಾಳೆ ಮಧ್ಯಾಹ್ನ ಸರಿಯಾಗಿ 1.30 ಕ್ಕೆ 55 ನೇ ಗಣೇಶೋತ್ಸವದ ಅಂಗವಾಗಿ ಕರ್ನಾಟಕ ಹಿಂದೂ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಬೃಹತ್ ಬೈಕ್ ರ್‍ಯಾಲಿಯನ್ನು ಆಯೋಜಿಸಲಾಗಿದೆ


ಪೊಲೀಸ್ ಬಿಗಿ ಬಂದೋಬಸ್ತ್ :

ನಾಳೆ ನಡೆಯುವ ಗಣಪತಿ ಮೆರವಣಿಗೆಯ ಹಿನ್ನಲೆಯಲ್ಲಿ‌ ಪೊಲೀಸ್ ಇಲಾಖೆ ಪಟ್ಟಣದ ಎಲ್ಲೆಡೆ ಬಿಗಿ ಬಂದೋಬಸ್ತ್ ಕಲ್ಪಿಸಿದ್ದು ಸಿಸಿಟಿವಿ
,ಡ್ರೋನ್ ಕ್ಯಾಮೆರಾಗಳಲ್ಲಿ ಹಾಗೂ ಪ್ರತಿ ಹಂತದಲ್ಲೂ ಎಚ್ಚರಿಕೆ ವಹಿಸಲಾಗಿದೆ.

ಈ ಬಿಗಿ ಬಂದೋಬಸ್ತ್ ಕಾರ್ಯದಲ್ಲಿ 1 ಡಿವೈಎಸ್ಪಿ , 4 ಸರ್ಕಲ್ ಇನ್ಸ್ ಪೆಕ್ಟರ್ , 8 ಸಬ್ ಇನ್ಸ್ ಪೆಕ್ಟರ್ ,15 ಎ ಎಸ್ ಐ , 145 ಪೊಲೀಸ್ ಸಿಬ್ಬಂದಿಗಳು ,2 ತುಕಡಿ ಕೆ ಎಸ್ ಆರ್ ಪಿ ,2 ತುಕಡಿ ಡಿ ಎ ಆರ್ ಮತ್ತು 110 ಗೃಹರಕ್ಷಕ ದಳದವರು ಪಾಲ್ಗೊಳ್ಳಲಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

10 hours ago

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

23 hours ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

1 day ago

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

1 day ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

1 day ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

2 days ago