ಮಾಸ್ತಿಕಟ್ಟೆ : ಮಲೆನಾಡಿನಾದ್ಯಂತ ಸೆಕ್ಯುರಿಟಿ ಗಾರ್ಡ್ ಒಬ್ಬರು ಚಿರತೆಯನ್ನು ಹೆದರಿಸಿ ನಾಯಿಯನ್ನು ರಕ್ಷಿಸಿದ ವಿಡಿಯೋ ವೈರಲ್ ಆಗುತ್ತಿದೆ.
ಆ ರಾತ್ರಿ ಪವರ್ ಹೌಸ್ ನಲ್ಲಿ ನಡೆದಿದ್ದೇನು???
ಅವತ್ತು ರಾತ್ರಿ ಹೊಸಂಗಡಿ ಪವರ್ ಹೌಸ್ ಭದ್ರತಾ ಕೊಠಡಿಯಲ್ಲಿ ಸೆಕ್ಯುರಿಟಿ ಈರಪ್ಪ ಗೌಡ ಕರ್ತವ್ಯ ನಿರತರಾಗಿದ್ದರು. ಈ ವೇಳೆ ಅಲ್ಲಿದ್ದ ಒಂದು ನಾಯಿಯನ್ನು ಎಲ್ಲಿಂದಲೋ ಬಂದ ಚಿರತೆಯೊಂದು ಹಿಡಿದು ಓಡಲು ಆರಂಭಿಸಿತು.
ಅಷ್ಟರಲ್ಲಿ ಅಲ್ಲಿಯೇ ಇದ್ದ ಇನ್ನೊಂದು ಶ್ವಾನ ಜೋರಾಗಿ ಬೊಗಳಿದೆ. ತಕ್ಷಣ ಅಲರ್ಟ್ ಆದ ಭದ್ರತಾ ಸಿಬ್ಬಂದಿ ಈರಪ್ಪ ಗೌಡರು, ಚಿರತೆಯನ್ನು ಕೋಲು ಹಿಡಿದು ಬೆನ್ನಟ್ಟಿದ್ದಾರೆ.
ಅಲ್ಲದೆ ಚಿರತೆಯನ್ನು ಹೆದರಿಸಿ ನಾಯಿಯನ್ನು ರಕ್ಷಿಸಿದ್ದಾರೆ. ನಾಯಿ ಗಾಯಗೊಂಡಿತ್ತಾದರೂ ಬಳಿಕ ನೀಡಿದ ಚಿಕಿತ್ಸೆಯಿಂದಾಗಿ ಚೇತರಿಸಿಕೊಂಡಿದೆ.
ಸದ್ಯ ಈ ವಿಡಿಯೋ ಮೊಬೈಲ್ನಲ್ಲಿ ಹರಿದಾಡ್ತಿದ್ದು, ಈರಪ್ಪಗೌಡರ ಸಾಹಸಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಷ್ಟೆಅಲ್ಲದೆ ಚಿರತೆ ಬಾಯಿಯಿಂದ ಬಚಾವ್ ಆದ ನಾಯಿ ಚೇತರಿಸಿಕೊಂಡಿದ್ದು,
ಸ್ಥಳೀಯರು ಈರಪ್ಪಗೌಡ ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಈ ಘಟನೆ ಕೆಲ ದಿನಗಳ ಹಿಂದೆ ನಡೆದಿದ್ದು ಈಗ ವೀಡಿಯೋ ವೈರಲ್ ಆಗುತ್ತಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್