ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚರಣೆಯ ಅಂಗವಾಗಿ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ನೆರೆವೇರಿಸಲಾಯಿತು.
ರಿಪ್ಪನ್‌ಪೇಟೆ-ಹುಂಚ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ಮಾತನಾಡಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ಮೋದಿಯವರ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ,ತಾಪಂ ಮಾಜಿ ಅಧ್ಯಕ್ಷೆ ನಾಗರತ್ನ ದೇವರಾಜ್ ,ಗ್ರಾಪಂ ಸದಸ್ಯರಾದ ಸುಧೀಂದ್ರ ಪೂಜಾರಿ , ಪಿ ರಮೇಶ್ ,ಸುಂದರೇಶ್ ,ಬಿಜೆಪಿ ತಾಲೂಕ್ ಪ್ರಧಾನ ಕಾರ್ಯದರ್ಶಿ ನಾಗಾರ್ಜುನ ಸ್ವಾಮಿ,ವಿನಾಯಕ್ ಹುಂಚಮುಖಂಡರಾದ ಯೋಗೆಂದ್ರಪ್ಪ ಗೌಡ , ಸುರೇಶ್ ಸಿಂಗ್ , ಪದ್ಮಾ ಸುರೇಶ್ , ಕಗ್ಗಲಿ ಲಿಂಗಪ್ಪ , ಜಂಬಳ್ಳಿ ಗಿರೀಶ್ , ಶೈಲಾ ಆರ್ ಪ್ರಭು , ಶ್ವೇತಾ ಮತ್ತು ಹೂವಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್