ಬೆನವಳ್ಳಿ : ನರೇಗಾ ಕಾಮಗಾರಿಗೆ ತಡರಾತ್ರಿ ಟ್ರ್ಯಾಕ್ಟರ್ ಬಳಕೆ : ಗ್ರಾಮಸ್ಥರ ತಡೆ

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆನವಳ್ಳಿ ಸರ್ಕಾರಿ ಪಾಠಶಾಲೆಯ ಆಟದ ಮೈದಾನ ಸಮತಟ್ಟು ಕಾಮಗಾರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಹಣ ಮಂಜಾರಾಗಿದ್ದು ಕಳೆದ ಒಂದು ತಿಂಗಳಿಂದ ಕೂಲಿಗಳ ಮೂಲಕ ಕಾಮಗಾರಿ ನಿರ್ವಹಿಸಲಾಗುತ್ತಿತ್ತು.

ಆದರೆ ಸೋಮವಾರ ಮಧ್ಯರಾತ್ರಿಯಲ್ಲಿ ಏಕಾಏಕಿ ಟ್ರ್ಯಾಕ್ಟರ್ ತಂದು ನರೇಗ ಕಾಮಗಾರಿ ನಿರ್ವಹಿಸುವುದನ್ನು ಖಂಡಿಸಿ ಅಧಿಕಾರಿಗಳು ಬರುವವರೆಗೂ ಟ್ರ್ಯಾಕ್ಟರ್ ಹೊರ ಬಿಡದೇ ಪಟ್ಟು ಹಿಡಿದು ಬೆನವಳ್ಳಿಯ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.


ಸುಮಾರು 15 ರಿಂದ 20 ಜನ ಮಹಿಳಾ ಕೂಲಿಗಳ ಮೂಲಕ ನರೇಗಾ ಕಾಮಗಾರಿಯನ್ನು ಕಳೆದ ಒಂದು ತಿಂಗಳ ಕಾಲದಿಂದಲೂ ಮಾಡಲಾಗುತಿದ್ದು ಖಾತ್ರಿ ಯೋಜನೆಯ ಇಂಜಿನಿಯರ್ ಮತ್ತು ಗ್ರಾಮ ಪಂಚಾಯ್ತಿ ಪಿಡಿಓ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತಿತ್ತು.

ಸೋಮವಾರ ಏಕಾಏಕಿ ಟ್ಯಾಕ್ಟರ್‌ ತಂದು ಮಧ್ಯರಾತ್ರಿಯಲ್ಲಿ ಕಾಮಗಾರಿ ಮಾಡಲಾಗುತ್ತಿತ್ತು ಕೂಡಲೇ ನರೇಗಾ ಕೂಲಿಕಾರ್ಮಿರು ಮತ್ತು ಗ್ರಾಮಸ್ಥರು ಅನಧಿಕೃತವಾಗಿ ಉದ್ಯೋಗ ಖಾತ್ರಿ ಕಾಮಗಾರಿಯನ್ನು ಮಾಡಲು ಬಂದಂತಹ ಟ್ಯಾಕ್ಟರ್ ತಡೆದು ಪ್ರತಿಭಟಿಸಿದರು.

ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ತಾಲ್ಲೂಕ್ ಪಂಚಾಯ್ತಿ ಇಓ ಪ್ರವೀಣ್‌ಕುಮಾರ್‌ ಮತ್ತು ಖಾತ್ರಿ ಯೋಜನಾಧಿಕಾರಿಗಳು ಹಾಗೂ ಇಂಜಿನಿಯರ್ ಮಧ್ಯರಾತ್ರಿಯಲ್ಲಿ ಇಂತಹ ಕೃತ್ಯ ಎಸಗಿರುವುದು ತಪ್ಪು ಮತ್ತು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಯಂತ್ರ ಬಳಕೆ ಮಾಡಬಾರದೆಂಬ ನಿಯಮವಿದೆ ಎಂದು ಪ್ರತಿಭಟನಾ ನಿರತರಿಗೆ ವಿವರಿಸಿ ಟ್ಯಾಕ್ಟರ್ ಮತ್ತು ಚಾಲಕನ ವಿರುದ್ಧ ಕೇಸ್ ದಾಖಲಿಸಿ ಕೂಲಿಗಳ ಮೂಲಕವೇ ಕಾಮಗಾರಿ ಮಾಡುವಂತೆ ಪಿಡಿಓಗೆ ಸೂಚಿಸಿ ಖಾತ್ರಿ ಯೋಜನಡೆಯಡಿ ಕಾಮಗಾರಿ ಮಾಡುತ್ತಿರುವ ಕೂಲಿಗಳ ಖಾತೆಗೆ ಹಣ ನೀಡುವಂತೆ ಅದೇಶಿಸಿದರು.

ಪ್ರತಿಭಟನೆಯಲ್ಲಿ ಆಶೋಕ ಬೆನವಳ್ಳಿ,ಪ್ರವೀಣ್,ಸೋಮಶೇಖರ ದೂನ (ರಾಜು),ನಳಿನಾ,ವಿನಯ,ಮಹೇಂದ್ರ,ಬೆನವಳ್ಳಿ ಗ್ರಾಮಸ್ಥರು ಹಾಗೂ ಇನ್ನಿತರರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

2 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

2 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

5 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

5 hours ago

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

10 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

10 hours ago