ಭದ್ರಾವತಿ : ಹಿಂದೂ ಮಹಾ ಸಭಾ ಗಣಪತಿ ವಿಸರ್ಜನಾಪೂರ್ವ ಮೆರವಣಿಗೆಗೆ ಹೊಸ ಮನೆ ಮುಖ್ಯರಸ್ತೆ ತಮಿಳು ಶಾಲೆ ಬಳಿ ಮಧ್ಯಾಹ್ನ 12ರ ಸಮಯದಲ್ಲಿ ಶಾಸಕ ಬಿ. ಕೆ ಸಂಗಮೇಶ್ವರ್ ಚಾಲನೆ ನೀಡಿದರು.
ಡೊಳ್ಳು ಕುಣಿತ ವೀರಗಾಸೆ ಗೊಂಬೆ ನೃತ್ಯ ಕೋಲಾಟ ಕಂಸಾಳೆ ಸೇರಿದಂತೆ ವಿವಿಧ ಕಲಾ ತಂಡಗಳೊಂದಿಗೆ ಆರಂಭಗೊಂಡ ಉತ್ಸವ ಮೆರವಣಿಗೆ ಮಧ್ಯಾಹ್ನ 3ರ ವೇಳೆಗೆ ರಂಗಪ್ಪ ವೃತ್ತ ತಲುಪಿತು.
ಮೆರವಣಿಯುದ್ದಕ್ಕೂ ಭಕ್ತರಿಂದ, ಸೇವಾಕರ್ತರಿಂದ ಮಜ್ಜಿಗೆ, ಪಾನಕ, ಕೋಸಂಬರಿ, ಮೈಸೂರ್ ಪಾಕ್, ಲಾಡು ವಿತರಣೆ ಜೊತೆಗೆ ಅನ್ನ ಸಂತರ್ಪಣೆಗಳು ಸಹ ಜರುಗಿದವು.
ಸಂಸದ ಬಿ ವೈ ರಾಘವೇಂದ್ರ ರಂಗಪ್ಪ ವೃತ್ತದಲ್ಲಿ ವಿನಾಯಕ ಸೇವಾ ಸಮಿತಿ ವತಿಯಿಂದ ನಿರ್ಮಿಸಲು ಉದ್ದೇಶಿಸಲಾಗಿರುವ ದ್ವಾರಬಾಗಿಲು ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು. ನಗರಸಭೆ ಪ್ರಭಾರ ಅಧ್ಯಕ್ಷ ಚೆನ್ನಪ್ಪ, ಸ್ಥಾಯಿ ಸಮಿತಿಯ ಅಧ್ಯಕ್ಷ ಕೆ ಸುದೀಪ್ ಕುಮಾರ್, ವಿನಾಯಕ ಸೇವಾ ಸಮಿತಿ ಅಧ್ಯಕ್ಷ ಕದಿರೇಶ್ ಸೇರಿದಂತೆ ನಗರಸಭಾ ಸದಸ್ಯರು, ವಿನಾಯಕ ಸೇವಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮೆರವಣಿಗೆಯಲ್ಲಿ ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ಜೆಡಿಎಸ್ ಘಟಕದ ಜಿಲ್ಲಾಧ್ಯಕ್ಷ ಮಧು ಕುಮಾರ್ ಹಾಗೂ ನಗರಸಭಾ ಸದಸ್ಯರು ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ನಗರದ ವಿವಿಧೆಡೆಗಳಿಂದ ಸಾವಿರಾರು ಮಂದಿ ಭಕ್ತಾದಿಗಳು ಪಾಲ್ಗೊಂಡಿದ್ದರು.