ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾಮನಗದ್ದೆ ನಿವಾಸಿ ಲೋಕೇಶ್ ಎಂಬವರ ಮನೆಯ ಹೊರಭಾಗದ ಗೋಡೆ ಕುಸಿದ ಪರಿಣಾಮ ಮೂವರಿಗೆ ಗಂಭೀರ ಪೆಟ್ಟು ತಗುಲಿದೆ.
ಗುರುವಾರ ಸಂಜೆ ಸುರಿದ ಭಾರಿ ಮಳೆಗೆ ಮನೆಯ ಹೊರಭಾಗದಲ್ಲಿ ಕೃಷಿ ಸಾಮಾಗ್ರಿಗಳನ್ನು ದಾಸ್ತಾನಿರಿಸಿದ ಕಡುಮಾಡಿನ ಒಳಗೆ ಪ್ರವಾಹದ ರೀತಿಯಲ್ಲಿ ಏಕಾಏಕಿ ನೀರು ನುಗ್ಗಿತ್ತು. ಕುಟುಂಬಸ್ಥರು ಸೇರಿ ಅಲ್ಲಿದ್ದ ಕೃಷಿ ಪರಿಕರಗಳನ್ನು ಒಳಗೆ ಸಾಗಿಸುತ್ತಿರುವಾಗ ನೀರಿನ ರಭಸಕ್ಕೆ ಗೋಡೆ ಸಂಪೂರ್ಣ ಕುಸಿದು ಬಿದ್ದು ಗೋಡೆಯಡಿಯಲ್ಲಿ ನಾಲ್ವರು ಸಿಲುಕಿಕೊಂಡರು.
ತಕ್ಷಣವೇ ಉಳಿದವರು ನಾಲ್ವರನ್ನು ಹೊರಕ್ಕೆಳೆದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ಈ ದುರ್ಘಟನೆಯಲ್ಲಿ ಲೋಕೇಶ್ ಪತ್ನಿ ವೇದಾವತಿ ಅವರಿಗೆ ಕಾಲು ಹಾಗೂ ತಲೆಗೆ ಗಂಭೀರ ಪೆಟ್ಟು ತಗುಲಿತ್ತು. ಕಾಲು ಮುರಿದಿದೆ.ಮಕ್ಕಳಾದ ಜಿ .ಎನ್ ತೇಜಸ್ ಹಾಗೂ ಜಿ.ಎನ್ ಹರ್ಷವರ್ಧನ್ ಗೆ ಗಂಭೀರ ಪೆಟ್ಟು ತಗುಲಿ ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ತಾಯಿ ಲಕ್ಷ್ಮಮ್ಮ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಹೊರರೋಗಿಗಳಾಗಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.
ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಬೆಳ್ಳೂರು ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳು ಹಾಗೂ ಪಿಡಿಒ ಭೇಟಿ ನೀಡಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್