ರಿಪ್ಪನ್‌ಪೇಟೆ : ನಿವೃತ್ತ ಎಎಸ್ ಐ ಗಣಪತಿ ಎಂ ರವರಿಗೆ ಆತ್ಮೀಯ ಬೀಳ್ಕೊಡುಗೆ |ASI

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎ ಎಸ್ ಐ ಗಣಪತಿ ಎಂ ರವರಿಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು.

ಕಳೆದ 30 ವರ್ಷಗಳಲ್ಲಿ ಭದ್ರಾವತಿ ,ಶಿವಮೊಗ್ಗ ಮತ್ತು ರಿಪ್ಪನ್‌ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದ ಗಣಪತಿ ಎಂ ರವರನ್ನು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಶಿವಾನಂದ ಕೋಳಿ ಮತ್ತು ಸಿಬ್ಬಂದಿ ವರ್ಗದವರು ಆತ್ಮೀಯವಾಗಿ ಬೀಳ್ಕೊಟ್ಟರು.


ನಂತರ ಮಾತನಾಡಿದ ನಿವೃತ ಎ ಎಸ್ ಐ ಗಣಪತಿ ಎಂ 30 ವರ್ಷ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿರುವುದು ತೃಪ್ತಿ ತಂದಿದೆ.ಇಲಾಖೆಯಲ್ಲಿ ನಾನು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಲು ಹಿರಿಯ ಅಧಿಕಾರಿಗಳು ಪ್ರೋತ್ಸಾಹ ಹಾಗೂ ಸಹದ್ಯೋಗಿಗಳು ತುಂಬಾ ಸಹಕಾರವನ್ನು ನೀಡಿದ್ದಾರೆ ಅವರಿಗೆ ಈ ಸಂಧರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.


ಈ ಸಂಧರ್ಭದಲ್ಲಿ ಮಾತನಾಡಿದ ಪಿಎಸ್ ಐ ಶಿವಾನಂದ ಕೋಳಿ ಸೇವೆಯಲ್ಲಿ ಕರ್ತವ್ಯನಿಷ್ಠೆಯೊಂದಿಗೆ ಕಾರ್ಯನಿರ್ವಹಿಸಿ ಸರಳ ವ್ಯಕ್ತಿತ್ವದಲ್ಲಿ ಸಾರ್ಥಕತೆ ಕಂಡುಕೊಂಡು ನಿವೃತ್ತಿ ಹೊಂದುತ್ತಿರುವ ಇವರ ಜೀವನ ಸುಖಮಯವಾಗಿರಲಿ,ಇಲಾಖೆಯಲ್ಲಿ ಸೇವೆ ಸಲ್ಲಿಸಿದವರನ್ನು ಇಲಾಖೆಯು ಎಂದೂ ಮರೆಯುವುದಿಲ್ಲ. ತಮಗೆ ವಹಿಸಿದ ಕೆಲಸವನ್ನು ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ನಿರ್ವಹಿಸಿ ಅಧಿಕಾರಿಗಳು ಮತ್ತು ಸಾರ್ವಜನಿಕರ ಪ್ರೀತಿ-ವಿಶ್ವಾಸ ಗಳಿಸಿದ್ದಾರೆ. ನಿವೃತ್ತಿ ನಂತರವು ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರ ನಡುವೆ ಸಂಪರ್ಕ ಸೇತುವೆಯಾಗಿ ನೀವು ಕಾರ್ಯನಿರ್ವಹಿಸಬಹುದು ಎಂದು ಹೇಳಿದರು.

ಈ ಸಂಧರ್ಭದಲ್ಲಿ ಎ ಎಸ್ ಐ ಹಾಲಪ್ಪ ,ಸಿಬ್ಬಂದಿಗಳಾದ ಉಮೇಶ್ ,ಶಿವುಕುಮಾರ್ ,ಪ್ರೇಮ್ ಕುಮಾರ್ ,ಮಧುಸೂದನ್ ಸೇರಿದಂತೆ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

1 hour ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

2 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

5 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

5 hours ago

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

9 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

9 hours ago