ರಿಪ್ಪನ್ ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಎಲ್ಲಾ ಸಮಾಜದ ಉನ್ನತಿಗಾಗಿ ಸಮುದಾಯ ಭವನಗಳ ನಿರ್ಮಾಣವಾಗಿದೆ ಕೆಲವು ಮಾತ್ರ ನಿರ್ಮಾಣ ಹಂತದಲ್ಲಿದ್ದು ಶೀಘ್ರ ಕೆಲಸವನ್ನು ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದು ಸಂಸದರಾದ ಬಿ ವೈ ರಾಘವೇಂದ್ರ ತಿಳಿಸಿದರು.
ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಶಿವ ಮಂದಿರ ಹಾಗೂ ಶ್ರೀ ರಾಮಭವನದ ಕಾಮಗಾರಿಯನ್ನು ವೀಕ್ಷಿಸಿ ನಂತರ ಅವರು ಮಾತನಾಡಿದರು.ನೂತನ ರೈಲ್ವೇ ಕಾಮಗಾರಿ, ವಿಮಾನ ನಿಲ್ದಾಣ, ನ್ಯಾಷನಲ್ ಹೈವೇ, ಸ್ಮಾರ್ಟ್ ಸಿಟಿ, ವಿಶ್ವ ವಿಖ್ಯಾತ ಜೋಗ ಜಲಪಾತದ ಅಭಿವೃದ್ಧಿ ಹಾಗೂ ಹೊಸನಗರ ತಾಲೂಕಿನ ಕೊಡಚಾದ್ರಿ – ಕೊಲ್ಲೂರು ಕೇಬಲ್ ಕಾರ್, ಮಾವಿನಕೊಪ್ಪದಿಂದ – ನಾಗೋಡಿ ವರೆಗೆ 766c ನೂತನ ಬೈಪಾಸ್ (ಕೊಲ್ಲೂರು ), ನಿರ್ಮಾಣದಿಂದ ಪ್ರವಾಸೋದ್ಯಮ ಬೆಳೆದು ಉದ್ಯೋಗ ಸೃಷ್ಟಿಯಾಗಲಿದೆ,ಈ ಮೂಲಕ ಸಮಗ್ರ ಜಿಲ್ಲೆ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸಿದ್ದೇನೆ ಎಂದು ಅವರು ತಿಳಿಸಿದರು.
ಈ ಸಂಧರ್ಭದಲ್ಲಿ ಸಮಾಜ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.
ಶಿಥಿಲ ಸ್ಥಿತಿಯಲ್ಲಿದ್ದ ಅರಸಾಳು ರೈಲ್ವೇ ನಿಲ್ದಾಣವನ್ನು ಅಭಿವೃದ್ಧಿ ಪಡಿಸಿ, ಮಾಲ್ಗುಡಿ ರೈಲ್ವೇ ಮ್ಯೂಸಿಯಂ ನಿರ್ಮಿಸಿದ್ದೇವೆ, ಮುಂದಿನ ದಿನದಲ್ಲಿ ಜನತೆಗೆ ಅನುಕೂಲವಾಗುವಂತೆ ರೈಲುಗಳನ್ನು ಅರಸಾಳಿನಲ್ಲಿ ಸ್ಟಾಪ್ ನೀಡಲು ಈಗಾಗಲೇ ರೈಲ್ವೇ ಜೆನರಲ್ ಮ್ಯಾನೇಜರ್ ಅವರಿಗೆ ಮನವಿ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಸುರೇಶ್, ಪದ್ಮ, ನಾಗರಾಜ್, ಪ್ರೇಮಚಂದ್ರ, ರಿಪ್ಪನಪೇಟೆ ಗ್ರಾ.ಪಂ ಅಧ್ಯಕ್ಷರಾದ ಮಂಜುಳಾ ಕೇತಾರ್ಜಿರಾವ್,ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್,ಗ್ರಾಪಂ ಸದಸ್ಯ ನಿರೂಪ್ ಕುಮಾರ್,ಸ್ವಾಮಿ ಗೌಡ್ರು, ವರ್ತೆಶ್ ಹುಗುಡಿ, ರಾಜೇಂದ್ರ ಗಂಟೆ, ಯುವರಾಜ ಗೌಡ್ರು ಚಿಕ್ಕಮಣತಿ, ಅಶೋಕ ಬೆನವಳ್ಳಿ,ತಿರ್ತೆಶ್ ನಾಗಭೂಷಣ್ ಮುಡುಬ, ಶಾಂತಕುಮಾರ್ ಜಂಬಳ್ಳಿ, ನಿಂಗಪ್ಪ ಬೆನವಳ್ಳಿ, ನಿಂಗಪ್ಪ ಕಗ್ಲಿ ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್