Headlines

ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ತಡರಾತ್ರಿ PFI ,SDPI ಕಾರ್ಯಕರ್ತರ ಮನೆ ಮೇಲೆ ದಾಳಿ : ಐವರು ವಶಕ್ಕೆ

ಶಿವಮೊಗ್ಗ : ಪಿಎಫ್‌ಐ ಸಂಘಟನೆ ಮುಖಂಡರು, ಕಾರ್ಯಕರ್ತರ ಮನೆಗಳ ಮೇಲೆ ದಾಳಿ ಮುಂದುವರೆದಿದೆ. ಇವತ್ತು ಬೆಳಗಿನ ಜಾವ ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ದಾಳಿ ನಡೆದಿವೆ.

ಶಿವಮೊಗ್ಗ ನಗರದ ಎರಡು ಕಡೆ ಮತ್ತು ಭದ್ರಾವತಿಯಲ್ಲಿ ಮೂರು ಕಡೆ ದಾಳಿ ನಡೆಸಲಾಗಿದೆ. ಈಗಾಗಲೇ ಐವರನ್ನು ವಶಕ್ಕೆ ಪಡೆದಿರುವ ಕುರಿತು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇನ್ನು ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಕಡೆ ಕಾರ್ಯಾಚರಣೆ ನಡೆಸಲಾಗಿದೆ. ಬೆಳಗಿನ ಜಾವ 3 ಗಂಟೆ ಹೊತ್ತಿಗೆ ಪೊಲೀಸರು ಮನೆಗಳ ಮೇಲೆ ದಾಳಿ ಮಾಡಿ, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಭದ್ರಾವತಿಯ ಓಲ್ಡ್ ಟೌನ್ ಠಾಣೆ ವ್ಯಾಪ್ತಿಯಲ್ಲಿಯು ಕಾರ್ಯಾಚರಣೆ ನಡೆಸಲಾಗಿದೆ. ಮೂರು ಕಡೆ ದಾಳಿ ನಡೆಸಿರುವ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು
ಬರಬೇಕಿದೆ.

ಬಂಧನದ ಬಗ್ಗೆ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿಕೆಯ ವೀಡಿಯೋ ಇಲ್ಲಿ ವೀಕ್ಷಿಸಿ👇

Leave a Reply

Your email address will not be published. Required fields are marked *