ರಿಪ್ಪನ್‌ಪೇಟೆ : ಬಿಎಂಎಸ್ ಶಿಕ್ಷಣ ಟ್ರಸ್ಟ್‌ನಲ್ಲಿ ನಡೆದ ಅಕ್ರಮಗಳಿಗೆ ಸಹಕಾರ ನೀಡಿದ್ದಾರೆ ಎನ್ನಲಾಗುತ್ತಿರುವ ಕಾರಣ ಅಶ್ವಥ್ ನಾರಾಯಣ್ ರಾಜೀನಾಮೆ ನೀಡಬೇಕು ರಾಜೀನಾಮೆ ಜತೆಗೆ ಈ ಅಕ್ರಮಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕು. ಟ್ರಸ್ಟ್ ಮತ್ತು ಅದರ ಎಲ್ಲಾ ಸ್ವತ್ತುಗಳನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ತೀರ್ಥಹಳ್ಳಿ ಜೆಡಿಎಸ್ ಯುವ ಮುಖಂಡ ಯಡೂರು ರಾಜಾರಾಮ್ ಆಗ್ರಹಿಸಿದ್ದಾರೆ.
ಪಟ್ಟಣದಲ್ಲಿ ಪತ್ರೀಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ನಮ್ಮ ನಾಯಕರಾದ ಕುಮಾರಸ್ವಾಮಿ ಬಗ್ಗೆ ಮಾತನಾಡುವಾಗ ಅಶ್ವಥ್ ನಾರಾಯಣ ಅವರು ಎಚ್ಚರಿಯಿಂದಿರಬೇಕು.ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಶಿವಮೊಗ್ಗಕ್ಕೆ ಅವರು ಬಂದಾಗ ಅವರ ಧಾಟಿಯಲ್ಲಿಯೇ ಉತ್ತರ ನೀಡಬೇಕಾಗುತ್ತದೆ.ನೋಡಲು ಸೌಮ್ಯ ಸ್ವಭಾವದ ಹಾಗೇ ಕಾಣುವ ಅಶ್ವಥ್ ನಾರಾಯಣ್ ರವರ ಸ್ವಭಾವ ವ್ಯಾಘ್ರ ಮನಸ್ಥಿತಿಯಲ್ಲಿದೆ.
ಈ ಕೂಡಲೇ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ರಾಜ್ಯದ ಮತ್ತು ಕುಮಾರಸ್ವಾಮಿಯ ಕ್ಷಮೆ ಕೇಳಬೇಕು ಇಲ್ಲದಿದ್ದಲ್ಲಿ ಅವರ ವಿರುದ್ದ ಜಿಲ್ಲಾದ್ಯಾಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಂತರ ಮಾತನಾಡಿದ ಜೆಡಿಎಸ್ ರಾಜ್ಯ ಮುಖಂಡ ಅರ್ ಎ ಚಾಬುಸಾಬ್ ಬಿಎಂಎಸ್ ಶಿಕ್ಷಣ ಟ್ರಸ್ಟ್ ನಲ್ಲಿ ದಾಖಲಾತಿಗಳ ಪ್ರಕಾರ ಸರ್ಕಾರಕ್ಕೆ 10 ಸಾವಿರ ಕೋಟಿ ರೂ ವಂಚನೆಯಾಗಿದೆ ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಅವರ ರಾಜೀನಾಮೆ ಪಡೆಯಬೇಕು.
ನಮ್ಮ ನಾಯಕ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿಯವರ ಬಗ್ಗೆ ಅವಹೇಳನಕಾರಿಯಾಗಿ ಗೂಂಡಾ ರೀತಿಯಲ್ಲಿ ಮಾತನಾಡಿದ ಅಶ್ವಥ್ ನಾರಾಯಣ್ ಕೂಡಲೇ ರಾಜ್ಯದ ಹಾಗೂ ಕುಮಾರಸ್ವಾಮಿರವರ ಕ್ಷಮೆ ಕೇಳಬೇಕು ಇಲ್ಲದಿದ್ದಲ್ಲಿ ಅವರ ವಿರುದ್ದ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.