ಹುಂಚದ ಕಟ್ಟೆ : ಇಲ್ಲಿನ ಈಶ್ವರ ದೇವಸ್ಥಾನದ ಮುಂಭಾಗ ನಡೆದುಕೊಂಡು ಹೋಗುತಿದ್ದ ಪಾದಚಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ವೃದ್ದರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಹುಂಚದ ಕಟ್ಟೆ ನಿವಾಸಿ ಪುಟ್ಟಸ್ವಾಮಿ ಗೌಡ (70) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಘಟನೆಯ ಹಿನ್ನಲೆ :
ಪುಟ್ಟಸ್ವಾಮಿ ಗೌಡ ಹುಂಚದಕಟ್ಟೆ ಈಶ್ವರ ದೇವಸ್ಥಾನದ ಎದುರು ನಡೆದುಕೊಂಡು ಹೋಗುತಿದ್ದಾಗ ಹಿಂಬದಿಯಿಂದ ಬಂದ ಮಾರುತಿ ಆಲ್ಟೋ ಕಾರು ವೃದ್ದನಿಗೆ ಡಿಕ್ಕಿ ಹೊಡೆದು ವಾಹನವನ್ನು ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದ್ದಾರೆ.
ಅದೇ ವೇಗದಲ್ಲಿ ಚಲಿಸಿದ ಮಾರುತಿ ಆಲ್ಟೋ ಕಾರು ಕಟ್ಟೆ ರೋಡ್ ಬಳಿ ಪಲ್ಟಿಯಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ
ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.