w
Headlines
Home » ಹೃದಯಾಘಾತದಿಂದ ಆಹಾರ ಸಚಿವ ಉಮೇಶ್ ಕತ್ತಿ ನಿಧನ :

ಹೃದಯಾಘಾತದಿಂದ ಆಹಾರ ಸಚಿವ ಉಮೇಶ್ ಕತ್ತಿ ನಿಧನ :

ಆಹಾರ ಸಚಿವ ಉಮೇಶ್ ಕತ್ತಿ (61) ಅವರು ಹೃದಯಾಘಾತದಿಂದ ಇಂದು ( ಮಂಗಳವಾರ) ರಾತ್ರಿ ನಿಧನರಾದರು.

ಈ ಬಗ್ಗೆ ಎಲ್ಲ ಟಿವಿ ಮಾಧ್ಯಮಗಳು ವರದಿ ಮಾಡಿದ್ದು, ಈ ವರೆಗೆ ಆಸ್ಪತ್ರೆಯಿದ ಅಧಿಕೃತ ಘೋಷಣೆಯಾಗಿಲ್ಲ.  

ನಗರದ  ಡಾಲರ್ಸ್‌ ಕಾಲೋನಿ ನಿವಾಸದಲ್ಲಿದ್ದಾಗ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಅವರನ್ನು ಚಿಕಿತ್ಸೆಗಾಗಿ ಕುಟುಂಬದ ಸದಸ್ಯರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು. 
ಸದ್ಯ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮತ ಕ್ಷೇತ್ರದ ಶಾಸಕರಾಗಿದ್ದು, ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ಆಹಾರ ಹಾಗೂ ಅರಣ್ಯ ಖಾತೆಯನ್ನು ನಿರ್ವಹಿಸುತ್ತಿದ್ದರು. 

ಹುಕ್ಕೇರಿ ಶಾಸಕರಾಗಿದ್ದ ತಂದೆ ವಿಶ್ವನಾಥ್‌ ಕತ್ತಿ ಅಕಾಲಿಕ ನಿಧನದ ಬಳಿಕ 1985ರಲ್ಲಿ ರಾಜಕಾರಣ ಪ್ರವೇಶಿಸಿದ್ದ ಉಮೇಶ್‌ ಕತ್ತಿ 8 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.