w
Headlines
Home » ಹೆಂಡತಿಯ ಕುತ್ತಿಗೆ ಕೊಯ್ದು ಬರ್ಬರವಾಗಿ ಸಾಯಿಸಿದ ಪತಿರಾಯ :

ಹೆಂಡತಿಯ ಕುತ್ತಿಗೆ ಕೊಯ್ದು ಬರ್ಬರವಾಗಿ ಸಾಯಿಸಿದ ಪತಿರಾಯ :

ಗಂಡ ಹೆಂಡತಿಯ ನಡುವಿನ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯ ಕುತ್ತಿಗೆ ಕೊಯ್ದು ಬರ್ಬರವಾಗಿ ಕೊಲೆ ಮಾಡಿ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗದ ಪ್ರಿಯಾಂಕ ಲೇಔಟ್ ನಲ್ಲಿ ನಡೆದಿದೆ.


 ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪ್ರಿಯಾಂಕಾ ಲೇಜೌಟ್ ನಲ್ಲಿ ದಿನೇಶ ಮತ್ತು ಮಂಜುಳಾ ನಡುವೆ ಗಲಾಟೆಯಾಗಿದ್ದು, ಈ ಗಲಾಟೆಯೇ ಕೊಲೆಗೆ ಕಾರಣ ಎಂದು ದಿನೇಶ್ ಪೊಲೀಸರಿಗೆ ತಿಳಿಸಿದ್ದಾರೆ.


ಮೆಸ್ಕಾಂ ಉದ್ಯೋಗಿಯಾಗಿರುವ ದಿನೇಶ್ ತನ್ನ ಪತ್ನಿ ಮಂಜುಳಾ (30) ರವರನ್ನು ಕುತ್ತಿಗೆ ಕೊಯ್ದು ಹತ್ಯೆ ಮಾಡಿದ್ದಾನೆ ನಂತರ ತಾನೂ ಕೂಡ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನನ್ನ ಹೆಚ್ಚಿನ ಚಿಕಿತ್ಸೆಗಾಗಿ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ. ಮಂಜುಳಾ ಅಡುಗೆಮನೆಯಲ್ಲಿ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.


ಮೃತ ಮಂಜುಳಾ ಮತ್ತಿಘಟ್ಟದ ನಿವಾಸಿಯಾಗಿದ್ದು ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಇವರಿಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದು ಸ್ಥಳಕ್ಕೆ ತುಂಗಾ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ಸ್ಪಷ್ಟ ಕಾರಣ ತನಿಖೆಯ ನಂತರ ತಿಳಿದುಬರಬೇಕಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.