ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ : ಎಂ.ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡಕ್ಕೆ ಭರ್ಜರಿ ಗೆಲುವು

ರಿಪ್ಪನ್ ಪೇಟೆ : ಹೊಸನಗರ ತಾಲೂಕು ಒಕ್ಕಲಿಗರ ಸಂಘದ ಪದಾಧಿಕಾರಿಗಳ ಚುನಾವಣೆಯಲ್ಲಿ ರಿಪ್ಪನ್ ಪೇಟೆಯ ಎಂ. ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡಕ್ಕೆ  ಭರ್ಜರಿ ಗೆಲುವು ದೊರೆತಿದೆ.


15 ಜನ ನಿರ್ದೇಶಕರನ್ನು ಹೊಂದಿರುವ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಗರ್ತಿಕೆರೆ, ಹೆದ್ದಾರಿಪುರ, ಗುಬ್ಬಿಗ ಮತ ಕ್ಷೇತ್ರದಿಂದ ಮೂರು ಜನ ಅವಿರೋಧವಾಗಿ ಆಯ್ಕೆಯಾಗಿದ್ದರು. ಇನ್ನುಳಿದ 12 ಸ್ಥಾನಗಳಿಗಾಗಿ 27 ಜನ ಸ್ಪರ್ಧಾ ಕಣದಲ್ಲಿ ಉಳಿದುಕೊಂಡಿದ್ದರು.


ಹೊಸನಗರ ತಾಲೂಕು ಒಕ್ಕಲಿಗರ ಸಂಘಕ್ಕೆ ಇದು ಪ್ರಥಮ ಚುನಾವಣೆ :


ಈ ಬಾರಿಯ ಒಕ್ಕಲಿಗರ ಸಂಘದ ಚುನಾವಣೆ ತೀವ್ರ ಕುತೂಹಲ, ರೋಚಕ ಹಾಗೂ ಹಣಾಹಣಿಯಿಂದ ಕೂಡಿತ್ತು.35 ವರ್ಷಕ್ಕಿಂತಲೂ ಅಧಿಕ ಇತಿಹಾಸವನ್ನು ಹೊಂದಿರುವ ಹೊಸನಗರ ತಾಲೂಕು ಒಕ್ಕಲಿಗರ ಸಂಘಕ್ಕೆ ಇದು ಪ್ರಥಮ ಚುನಾವಣೆಯಾಗಿದ್ದು. ಈ ಹಿಂದೆ ಒಕ್ಕಲಿಗರ ಸಂಘಕ್ಕೆ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗುತ್ತಿದ್ದರು, ಒಕ್ಕಲಿಗರ ಸಂಘದ ಕೆಲವು ನಿರ್ದೇಶಕರು ಹಾಗೂ ಸದಸ್ಯರುಗಳು ಈ ಬಾರಿ ಚುನಾವಣೆ ನಡೆಸಲೇಬೇಕೆಂಬ ಹಠಕ್ಕೆ ಬಿದ್ದ ಕಾರಣ ನಿರ್ದೇಶಕರ ಆಯ್ಕೆಗಾಗಿ ಚುನಾವಣೆ ನಡೆಸಲು ಒಕ್ಕಲಿಗರ ಸಂಘದಲ್ಲಿ ತೀರ್ಮಾನವಾದ ಹಿನ್ನೆಲೆಯಲ್ಲಿ  ಸಪ್ಟೆಂಬರ್ 4ರಂದು ರಿಪ್ಪನ್ ಪೇಟೆಯ ವಿಶ್ವಮಾನ ಭವನದಲ್ಲಿ ಚುನಾವಣೆ ನಡೆಸಲಾಯಿತು.


ಹೊಸನಗರ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಬಿ ಲಕ್ಷ್ಮಣಗೌಡ ಹಾಗೂ ಎಂ ಎಂ ಪರಮೇಶ್  ತಂಡದಿಂದ ಕಣಕ್ಕಿಳಿದ ಅಭ್ಯರ್ಥಿಗಳು ಮೊಟ್ಟಮೊದಲ ಬಾರಿಗೆ ನಡೆದ ಒಕ್ಕಲಿಗರ ಸಂಘದ 12 ಸ್ಥಾನಗಳಿಗಾಗಿ ನಡೆದ ಚುನಾವಣೆಯಲ್ಲಿ 9 ಸ್ಥಾನಗಳನ್ನು ಪಡೆದು ಜಯಭೇರಿ ಗಳಿಸಿದ್ದಾರೆ.



ವಿಜೇತರ ವಿವರ :

ಹಾಲೂಗುಡ್ಡೆ ಕ್ಷೇತ್ರದಿಂದ ಹೆಚ್,ಹೆಚ್ ಪುರುಷೋತ್ತಮ್, ಹೆಚ್ ವಿ ರಾಜೇಶ್, ಹರೀಶ್ ಹೆಚ್, ವಿ,. ವೆಂಕಟೇಶ್.ರಿಪ್ಪನ್‌ಪೇಟೆ ಕ್ಷೇತ್ರದಿಂದ ಎಂ.ಬಿ ಲಕ್ಷ್ಮಣಗೌಡ, ಎಂ ಎಂ ಪರಮೇಶ್, ಕೆರೆಹಳ್ಳಿ ಕ್ಷೇತ್ರದಿಂದ ಬಿ ಹೆಚ್ ಷಣ್ಮುಖಪ್ಪ ಗೌಡ,  ಕೋಟೆತಾರಿಗ ಕ್ಷೇತ್ರದಿಂದ ಮಹೇಶ್, ಮಂಜುನಾಥ್, ಹೆದ್ದಾರಿಪುರ ಕ್ಷೇತ್ರದಿಂದ ಎಚ್ ಪಿ ರಾಜೇಶ್, ಕಲ್ಲೂರು ಕ್ಷೇತ್ರದಿಂದ ಈ.ಡಿ ಮಂಜುನಾಥ್ ಕೆ ಸಿ ತೇಜಮೂರ್ತಿ ಗುಬ್ಬಿಗ ಕ್ಷೇತ್ರದಿಂದ ದಿನೇಶ್, ಗರ್ತಿಕೆರೆ ಕ್ಷೇತ್ರದಿಂದ ಕೃಷ್ಣಮೂರ್ತಿ, ಬುಕ್ಕಿವರೆ ಕ್ಷೇತ್ರದಿಂದ ಸಿ ಸತೀಶ್. ಆಯ್ಕೆಯಾಗಿದ್ದಾರೆ.




ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಚುನಾವಣೆಯ ಅಧಿಕಾರಿಗಳು:

17 ದಿನಗಳ ಕಾಲ ನಡೆದ ಚುನಾವಣೆಯ ಪ್ರಕ್ರಿಯೆಯಲ್ಲಿ ಚುನಾವಣೆಯ ಅಧಿಕಾರಿಯಾಗಿ ವಕೀಲರಾದ  ಚಿಕ್ಕಜೇನಿ ರಾಮಚಂದ್ರ, ಸಹಾಯಕ ಚುನಾವಣೆ ಅಧಿಕಾರಿಯಾಗಿ ಬೆಳ್ಳೂರು ಸರ್ಕಾರಿ ಪ್ರೌಢಶಾಲೆಯ ನಿಕಟಪೂರ್ವ ಮುಖ್ಯ ಶಿಕ್ಷಕ ಹೆಚ್.ಎ.ರಾಧಾಕೃಷ್ಣ.  ಹಾಗೂ ಹೊಸನಗರ ತಾಲೂಕು ದೈಹಿಕ ಶಿಕ್ಷಣ ನಿಕಟ ಪೂರ್ವ ತಾಲೂಕ್ ಅಧಿಕಾರಿ  ಎ.ಚಂದ್ರ ಬಾಬು ಹಾಗೂ 15ಕ್ಕೂ ಹೆಚ್ಚು ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಶಿಕ್ಷಕರುಗಳು ಹೊಸನಗರ ತಾಲೂಕು ಒಕ್ಕಲಿಗರ ಸಂಘದ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago