ರಿಪ್ಪನ್‌ಪೇಟೆಯಲ್ಲಿ ಸುರಿದ ಭಾರಿ ಮಳೆಗೆ ತತ್ತರಿಸಿದ ಜನತೆ : ಅಂಗಡಿ ಮುಗ್ಗಟ್ಟುಗಳಿಗೆ ನುಗ್ಗಿದ ನೀರು
ರಿಪ್ಪನ್‌ಪೇಟೆ : ಭಾರಿ ಗುಡುಗು ಸಿಡಿಲು ಮಳೆಯಿಂದ ತತ್ತರಿಸಿದ ಪಟ್ಟಣದ ಜನತೆ,ಕಳೆದ ಒಂದು ಗಂಟೆಯಿಂದ ನಿರಂತರವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆ. ಪಟ್ಟಣದ ಸುತ್ತಮುತ್ತಲಿನ ಅರಸಾಳು ,ಬೆನವಳ್ಳಿ,ದೂನ,ಬಾಳೂರು ಸೇರಿದಂತೆ ಅನೇಕ ಹಳ್ಳಿಗಳಲ್ಲಿ ಭಾರಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತ ವಾಗಿದೆ. ರಿಪ್ಪನ್‌ಪೇಟೆಯಲ್ಲಿ ಸುರಿದ ಭಾರಿ ಮಳೆಗೆ ರಸ್ತೆಯಲ್ಲಿ ನೀರು ಹರಿದು ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ.ತೀರ್ಥಹಳ್ಳಿ ರಸ್ತೆಯಲ್ಲಿ ಪ್ರಭಾಕರ್ ಎಂಬುವವರ ಅಂಗಡಿಗೆ ನೀರು ನುಗ್ಗಿದೆ. ರಸ್ತೆಯ ಮೇಲೆ ಹರಿಯುತ್ತಿರುವ ಭಾರಿ ಪ್ರಮಾಣದ ನೀರಿನಿಂದ ಸಂಚಾರ ಅಸ್ತವ್ಯಸ್ತವಾಗಿದ್ದು,ವಿದ್ಯುತ್ ವ್ಯತ್ಯಯ ಉಂಟಾಗಿದೆ….