ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ಪ್ರವೇಶ ಪಡೆಯಲು ಹೆಲ್ಮೆಟ್ ಕಡ್ಡಾಯಗೊಳಿಸಲಿ : ಬೇಳೂರು ಆರೋಪ
ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ರೋಗಿಗಳು ಸೇರಿದಂತೆ ಪ್ರತಿಯೊಬ್ಬರು ಶಿರ ಕವಚ (ಹೆಲ್ಮೇಟ್) ಧರಿಸುವುದು ಕಡ್ಡಾಯಗೊಳಿಸಲಿ ಎಂದು ಗೋಪಾಲಕೃಷ್ಣ ಬೇಳೂರು ಹೇಳಿದರು. ಅವರು ಇಂದು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಹೆಲ್ಮೆಟ್ ಧರಿಸಿ ಜೀವ ಉಳಿಸಿಕೊಳ್ಳಿ ಈ ನಿಯಮ ಇನ್ನು ಮುಂದೆ ಈ ಸರ್ಕಾರಿ ಆಸ್ಪತ್ರೆಗೆ ಪ್ರವೇಶ ಪಡೆಯಲು ಕಡ್ಡಾಯ ಮಾಡಬೇಕಾಗಿದೆ ಎಂದರು. ಸರ್ಕಾರಿ ಆಸ್ಪತ್ರೆ ಕಟ್ಟಡವು ಶಿಥಿಲಗೊಂಡಿದ್ದು ಮೇಲ್ಚಾವಣಿಯ ಸಿಮೆಂಟಿನ ಗಾರೆ ಸೀಲಿಂಗ್ ಗಳು ಅತಿಯಾದ…