ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚರಣೆಯ ಅಂಗವಾಗಿ ರಿಪ್ಪನ್ಪೇಟೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ನೆರೆವೇರಿಸಲಾಯಿತು.
ರಿಪ್ಪನ್ಪೇಟೆ-ಹುಂಚ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ಮಾತನಾಡಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ಮೋದಿಯವರ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ,ತಾಪಂ ಮಾಜಿ ಅಧ್ಯಕ್ಷೆ ನಾಗರತ್ನ ದೇವರಾಜ್ ,ಗ್ರಾಪಂ ಸದಸ್ಯರಾದ ಸುಧೀಂದ್ರ ಪೂಜಾರಿ , ಪಿ ರಮೇಶ್ ,ಸುಂದರೇಶ್ ,ಬಿಜೆಪಿ ತಾಲೂಕ್ ಪ್ರಧಾನ ಕಾರ್ಯದರ್ಶಿ ನಾಗಾರ್ಜುನ ಸ್ವಾಮಿ,ವಿನಾಯಕ್ ಹುಂಚ ಮುಖಂಡರಾದ ಯೋಗೆಂದ್ರಪ್ಪ ಗೌಡ , ಸುರೇಶ್ ಸಿಂಗ್ , ಪದ್ಮಾ ಸುರೇಶ್ , ಕಗ್ಗಲಿ ಲಿಂಗಪ್ಪ , ಜಂಬಳ್ಳಿ ಗಿರೀಶ್ , ಶೈಲಾ ಆರ್ ಪ್ರಭು , ಶ್ವೇತಾ ಮತ್ತು ಹೂವಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.