ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಾವಿನಹೊಳೆ ನಿವಾಸಿ ಪ್ರಗತಿಪರ ರೈತ ಹಾಗೂ ಮಾಜಿ ಸೈನಿಕ ಚನ್ನಪ್ಪ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾಗಿದ್ದಾರೆ.
ಬೆಂಗಳೂರಿನಿಂದ ಮನೆಗೆ ವಾಪಸ್ಸಾಗುವಾಗ ಶಿವಮೊಗ್ಗ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮರಣ ಹೊಂದಿರುವುದಾಗಿ ಎಂದು ತಿಳಿದು ಬಂದಿದೆ.
ಈ ಅಪಘಾತದಲ್ಲಿ ಮೃತರ ಪತ್ನಿ ಮತ್ತು ಪುತ್ರಿಗೂ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಪುತ್ರಿಯನ್ನು ಬೆಂಗಳೂರಿಗೆ ತನ್ನ ಮಾರುತಿ ಆಲ್ಟೊ 800 ಕಾರಿನಲ್ಲಿ ಕರೆದುಕೊಂಡು ಹೋಗಿ ವಾಪಾಸ್ ಆಗುವಾಗ ರಾತ್ರಿ 2 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.