w
Headlines
Home » ರಸ್ತೆ ಅಪಘಾತ : ಭಾರತ್ ಜೋಡೋ ಯಾತ್ರೆಗೆ ತೆರಳಿದ್ದ ಕಾಂಗ್ರೆಸ್ ಕಾರ್ಯಕರ್ತ ಸಾವು |Accident

ರಸ್ತೆ ಅಪಘಾತ : ಭಾರತ್ ಜೋಡೋ ಯಾತ್ರೆಗೆ ತೆರಳಿದ್ದ ಕಾಂಗ್ರೆಸ್ ಕಾರ್ಯಕರ್ತ ಸಾವು |Accident

 

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಲ್ಲಲು ತೆರಳಿದ್ದ  ಕಾಂಗ್ರೆಸ್‌ ಕಾರ್ಯಕರ್ತನೋರ್ವ ಅಪಘಾತದಿಂದ ಮೃತಪಟ್ಟ ಘಟನೆ ಸೋಮವಾರ ಹಿರಿಯೂರಿನಲ್ಲಿ ನಡೆದಿದೆ.

ಸಾಗರ ತಾಲೂಕು ತ್ಯಾಗರ್ತಿ ಸಮೀಪದ ಹಿರೇಬಿಲಗುಂಜಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುತ್ತದಿಂಬ ಗ್ರಾಮದ ರಮೇಶ್‌ (62) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. 

ಎಂ.ಎಲ್ ರಮೇಶ್ ಅವರು ಭಾರತ್ ಜೋಡೊ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಸಾಗರ ತಾಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಜೊತೆ ಹಿರಿಯೂರಿಗೆ ತೆರಳಿದ್ದರು ಈ ಸಂದರ್ಭದಲ್ಲಿ ರಸ್ತೆ ದಾಟುವಾಗ ಖಾಸಗಿ ಬಸ್ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆನ್ನಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.