ರಿಪ್ಪನ್ಪೇಟೆ;-ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿನ ಗುಡ್ಶಫರ್ಡ್ ಫೂರಾನ ಚರ್ಚ್ ನವೀಕರಣಗೊಂಡು ಇದೇ ಅಕ್ಟೋಬರ್ ೨೬ ರಂದು ಬುಧವಾರ ಮಧ್ಯಾಹ್ನ ೩-೪೫ ಕ್ಕೆ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ.
ಲೋಕಾರ್ಪಣೆ ಕಾರ್ಯಕ್ರಮವು ಭದ್ರಾವತಿಯ ಎಂ.ಸಿ.ಬಿ.ಎಸ್.ಬೀಷಪ್ ಧರ್ಮಕ್ಷೇತ್ರದ ಜೋಸೆಫ್ ಅರುಮಜ್ಜಾ ಡತ್ ದಿವ್ಯ ಸಾನಿಧ್ಯದಲ್ಲಿ ಲೋಕಾರ್ಪಣೆಗೊಳ್ಳಲಿದೆ.
ಈ ಕಾರ್ಯಕ್ರಮದಲ್ಲಿ ಮುಖ್ಯ ಆತಿಥಿಗಳಾಗಿ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ,ಸಂಸದ ಬಿ.ವೈ.ರಾಘವೇಂದ್ರ,ಶಾಸಕ ಹರತಾಳು ಹಾಲಪ್ಪ, ರಿಪ್ಪನ್ಪೇಟೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್, ಉಪಾಧ್ಯಕ್ಷೆ ಮಹಾಲಕ್ಷಿ, ಗ್ರಾ.ಪಂ ಸದಸ್ಯರಾದ.ಈ.ಮಧುಸೂದನ್,ಪಿ.ರಮೇಶ್, ವನಮಾಲ,ಮದರ್ ಸುಪೀರಿಯರ್ ಮ.ಲಿಸ್ಸಾಮರಿಯಾ,ಭದ್ರಾವತಿ ಧರ್ಮಕ್ಷೇತ್ರದ ವಿಕಾರ್ ಜನರಲ್ ರೆ.ಫಾ.ಥಾಮಸ್ ಚಟ್ಟಲ್ಪಳ್ಳಿ,ಎಂಸಿಬಿಎಸ್ ಸುಪೀರಿಯರ್ ರೆ.ಫಾ.ಬೆನ್ನಿ ಪಡಿಕರ್,ಫಾಸ್ಟರ್ ಕೌಸ್ಸಿಲ್ ನಿರ್ದೇಶಕ ಜೋಮಿ ಮ್ಯಾಥ್ಯೂ ಹಾಗೂ ರಿಪ್ಪನ್ಪೇಟೆ ಗುಡ್ಶಫರ್ಡ್ ಫೂರಾನ ಚರ್ಚ್ ಧರ್ಮಗುರುಗಳಾದ ರೆ.ಫಾ.ಬಿನೋಯಿ ಭಾಗವಹಿಸುವರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್