ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಮಾಕರ್ ರಾಜೀನಾಮೆ ಸಲ್ಲಿಸಿದ್ದಾರೆ.
ಅರಸಾಳು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ 20 ತಿಂಗಳ ಕಾಲ ಕಾರ್ಯನಿರ್ವಹಿಸಿದ ಹೂವಪ್ಪ ಯಾನೆ ಉಮಾಕರ್ ಸಾಗರದ ಉಪ ವಿಭಾಗ ಅಧಿಕಾರಿಗಳಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.
ಕೆಲಸದ ಒತ್ತಡ ಹಾಗೂ ಕಾರಣಾಂತರದಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಾಗರ ನಗರಸಭೆಯ ವಿರೋಧ ಪಕ್ಷದ ನಾಯಕ ಗಣಪತಿ ಮಂಡಗಳಲೆ, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಸದಸ್ಯ ಆಸಿಫ್ ಭಾಷಾಸಾಬ್, ಹೆದ್ದಾರಿಪುರ ಗ್ರಾಮ ಪಂಚಾಯಿತಿ ಸದಸ್ಯ ಪ್ರವೀಣ್ ಇನ್ನಿತರರಿದ್ದರು.