ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಗಿಳಾಲಗುಂಡಿ ಗ್ರಾಮದ ಅಮ್ಮನಕೆರೆಯಲ್ಲಿ ಯುವಕನೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.
ಗಿಳಾಲಗುಂಡಿಯಲ್ಲಿ ತಮ್ಮ ಸಂಬಂಧಿಕರ ಮನೆಯ ಮದುವೆಗೆಂದು ಆಗಮಿಸಿದ್ದ ಚಿಕ್ಕಮಗಳೂರಿನ ಸಮೀಪದ ಹಾಂದಿ ಗ್ರಾಮದ ಯುವಕ ಅಮಿನ್ (19 ) ಮೃತಪಟ್ಟ ದುರ್ಧೈವಿಯಾಗಿದ್ದಾನೆ.
ಅಮ್ಮನಕೆರೆಯಲ್ಲಿ ಕುಟುಂಬದವರ ಜೊತೆ ಬಟ್ಟೆ ತೊಳೆಯಲು ಬಂದಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ.
ಘಟನೆ ತಿಳಿಯುತ್ತಿದ್ದಂತೆ ಕುಟುಂಬದವರು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ.ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಕಾರ್ಯಾಚರಣೆಯ ಮೂಲಕ ಯುವಕನ ಮೃತ ದೇಹವನ್ನು ಹೊರತೆಗೆದಿದ್ದಾರೆ.
ಸಾಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.