ಎಐಸಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ.
ಶಶಿ ತರೂರ್ ಅವರಿಗೆ 1072 ಮತಗಳು ಲಭಿಸಿದ್ದರೆ, ಖರ್ಗೆ ಅವರು 7897 ಮತಗಳನ್ನು ಪಡೆದುಕೊಂಡಿದ್ದಾರೆ.
ಎಐಸಿಸಿ ಅಧ್ಯಕ್ಷ ಹುದ್ದೆಗೆ ಅಕ್ಟೋಬರ್ 17ರಂದು ನಡೆದ ಮತದಾನದಲ್ಲಿ ಶೇ.96ರಷ್ಟು ಮತದಾನವಾಗಿತ್ತು.
ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ತಿರುವನಂತಪುರ ಸಂಸದ ಶಶಿ ತರೂರ್ ಅವರ ನಡುವೆ ಸ್ಪರ್ಧೆ ಏರ್ಪಟ್ಟಿತ್ತು. ಚುನಾವಣೆಗೆ ಮುಂಚೆಯೇ ಮಲ್ಲಿಕಾರ್ಜುನ ಖರ್ಗೆ ಗೆಲ್ಲಬಹುದು ಎಂದು ವಿಶ್ಲೇಷಣೆ ಮಾಡಲಾಗಿತ್ತು.
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ರವರಿಗೆ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ,ಕೆಪಿಸಿಸಿ ಸಹಕಾರ ವಿಭಾಗದ ಸಂಚಾಲಕರಾದ ಆರ್ ಎಂ ಮಂಜುನಾಥ್ ಗೌಡ ,ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ ,ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ ಸೇರಿದಂತೆ ಅನೇಕ ಗಣ್ಯರು ಶುಭಾಶಯಗಳನ್ನು ಸಲ್ಲಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್