ಕೆಂಚನಾಲದಲ್ಲಿ ಪ್ಲೆಕ್ಸ್ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ : ಗ್ರಾಮಸ್ಥರ ಮಧ್ಯಸ್ಥಿಕೆ |Flex

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಪ್ಲೆಕ್ಸ್ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದ್ದು ನಂತರ ಗ್ರಾಮಸ್ಥರ ಮಧ್ಯಸ್ಥಿಕೆಯಿಂದಾಗಿ ತಿಳಿಗೊಂಡಿದೆ.

ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಚನಾಲ ಗ್ರಾಮದ ವೃತ್ತದಲ್ಲಿ ಟಿಪ್ಪು ಸುಲ್ತಾನ್ ಬ್ಯಾನರ್ ಕಟ್ಟುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ.  ಟಿಪ್ಪು ಬ್ಯಾನರ್ ಕಟ್ಟಲು ಕೆಲ ಯುವಕರು ಮುಂದಾದಾಗ ಕೆಲ ಯುವಕರು ಆಕ್ಷೇಪಿಸಿದ್ದಾರೆ.

ಕೆಂಚನಾಲ ವೃತ್ತದಲ್ಲಿ ಇದುವರೆಗೂ ಯಾವ ಬ್ಯಾನರ್ ಗಳನ್ನು ಹಬ್ಬದ ಸಂದರ್ಭದಲ್ಲಿಯೂ ಕಟ್ಟಿರಲಿಲ್ಲ. ಈ ಬಾರಿ ಗಣಪತಿ ಹಬ್ಬಕ್ಕೆ ನಾವು ಕಟ್ಟಿಲ್ಲ. ಹಾಗಾಗಿ ನೀವು ಕಟ್ಟಬೇಡಿ ಎಂದು ಯುವಕರ ಗುಂಪೊಂದು ಆಕ್ಷೇಪಿಸಿತ್ತು.

ಕೆಂಚನಾಳ ಗ್ರಾಮದಲ್ಲಿ ನಾಳೆ ಈದ್ ಮಿಲಾದ್ ಹಬ್ಬವಿದ್ದು ಈ ಸಂಬಂಧ ಟಿಪ್ಪು ಸುಲ್ತಾನ್ ಬ್ಯಾನರ್ ಕಟ್ಟಲು ಯುವಕರು ಮುಂದಾಗಿದ್ದರು. ನಂತರ ಗ್ರಾಮದ ಮುಖಂಡರೆಲ್ಲಾ ಸೇರಿ ತೀರ್ಮಾನಿಸಿದ ನಂತರ ವೃತ್ತದ ಬಳಿ ಕಟ್ಟಿದ ಟಿಪ್ಪು ಸುಲ್ತಾನ್ ಪ್ಲೆಕ್ಸ್ ತೆಗೆಯಲಾಗಿದೆ.ಪರಿಸ್ಥಿತಿ ತಿಳಿಯಾಗಿದೆ ಎಂದು ಹೇಳಲಾಗುತ್ತಿದೆ.

ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ್ ಕೋಳಿ ಮತ್ತು ಸಿಬ್ಬಂದಿಗಳು ತೆರಳಿ ಪರಿಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

5 hours ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

6 hours ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

6 hours ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

10 hours ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

11 hours ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

11 hours ago