ಕೊಡಚಾದ್ರಿ ಗಿರಿ ಹತ್ತಿದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ಕೇರಳದ ಕನ್ನೂರು ಜಿಲ್ಲೆಯ ವಾಲಪ್ಪಿಲ್ ಸಮೀಪದ ಕೊಟ್ಟಾರತು ಗ್ರಾಮದ ನಿವಾಸಿ ಗೋವಿಂದನ್ ಕುನ್ನಪ್ಪ (72) ಮೃತ ವ್ಯಕ್ತಿ
ಶುಕ್ರವಾರದಂದು ಕೇರಳದಿಂದ ಕೊಲ್ಲೂರು ಶ್ರೀ ಮೂಕಾಂಬಿಕ ದರ್ಶನಕ್ಕೆ ಬಂದಿದ್ದ ಗೋವಿಂದನ್ ಕುಟುಂಬ ಕೊಲ್ಲೂರಿನಲ್ಲಿ ವಾಸ್ತವ್ಯ ಹೂಡಿ ಇಂದು ಬೆಳಿಗ್ಗೆ ಕೊಡಚಾದ್ರಿ ಗಿರಿಗೆ ಹೋಗಿದ್ದು ಪ್ರವಾಸಿಮಂದಿರದಿಂದ ಗಿರಿ ತುದಿಯ ಸರ್ವಜ್ಞ ಪೀಠಕ್ಕೆ ಕಾಲ್ನಡಿಗೆಯಲ್ಲಿ ತೆರಳಿದ್ದರು. ಸರ್ವಜ್ಞ ಪೀಠ ತಲುಪಿದ ನಂತರ ಅಲ್ಲೇ ಗೋವಿಂದನ್ ಕುನ್ನಪ್ಪ ಕುಸಿದು ಬಿದ್ದಿದ್ದಾರೆ.
ನಂತರ ಸ್ಥಳೀಯರ ಸಹಕಾರದಿಂದ ಕೊಡಚಾದ್ರಿ ಬೆಟ್ಟದಿಂದ ಕೆಳಗಿಳಿಸಿನಗರ ಸರ್ಕಾರಿ ಆಸ್ಪತ್ರೆಗೆ ತರಲಾಯಿತು. ವೈದ್ಯರು ಪರಿಶೀಲಿಸಿ ಮೃತಪಟ್ಟಿರುವುದನ್ನು ದೃಢಪಡಿಸಿದರು.