ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಚಿರತೆ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ.
ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಕ್ಯಾತಿನಕೊಪ್ಪ ರಸ್ತೆಯ ಸುತ್ತಮುತ್ತಲಿನ ಜಮೀನುಗಳಲ್ಲಿ ಕಳೆದೊಂದು ತಿಂಗಳಿನಿಂದ ಓಡಾಡುತ್ತಿದ್ದ ಚಿರತೆಯೊಂದು, ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಕೊನೆಗೂ ಬಿದ್ದಿದೆ.
ಕ್ಯಾತಿನಕೊಪ್ಪ ಗ್ರಾಮದ ಹೊರವಲಯದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಇದು ಗ್ರಾಮಸ್ಥರಲ್ಲಿ ಭಯ ಉಂಟು ಮಾಡಿತ್ತು. ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು.
ಇತ್ತೀಚೆಗೆ ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮಕೈಗೊಂಡಿತ್ತು. ಸೋಮವಾರ ಮುಂಜಾನೆ ಬೋನಿಗೆ ಚಿರತೆ ಬಿದ್ದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ರೇಂಜ್ ಆಫೀಸರ್ ಸುಧಾಕರ್ ಬಿ., ಡಿ.ಆರ್.ಎಫ್.ಓ. ಇನಾಯತ್, ಶರತ್, ಸಿಬ್ಬಂದಿಗಳಾದ ಮಂಜುನಾಥ್, ಹನುಮಂತಪ್ಪ, ಮಲ್ಲಪ್ಪ, ಇಫ್ತೀಕರ್ ಅವರು ಭೇಟಿ ನೀಡಿದ್ದರು.
ಬಸ್-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…
ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…
ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…
ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…