ಡಿನೋಟಿಫಿಕೇಷನ್ ರದ್ದುಗೊಳಿಸಿದ ರಾಜ್ಯ ಸರ್ಕಾರ : ಅತಂತ್ರಗೊಂಡ ಶರಾವತಿ ಮುಳುಗಡೆ ಸಂತ್ರಸ್ತರ ಬದುಕು|Sharavathi

ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕಿನ ಕನಸು ಮತ್ತೆ ಕಮರಿ‌ ಹೋಗಿದೆ.ನ್ಯಾಯಾಂಗ ನಿಂದನೆ ಭಯದಿಂದ‌ ರಾಜ್ಯ ಸರ್ಕಾರ ಡಿನೋಟಿಫಿಕೇಷನ್ ರದ್ದುಗೊಳಿಸಿದೆ. ಈ ಮೂಲಕ ರಾಜ್ಯಕ್ಕೆ ಬೆಳಕು ನೀಡಲು ತಮ್ಮ ಸರ್ವಸ್ವವನ್ನೇ ತ್ಯಾಗ ಮಾಡಿರುವ ಮುಳುಗಡೆ ಸಂತ್ರಸ್ತರನ್ನು ಸರ್ಕಾರ ಮತ್ತೊಮ್ಮೆ ಅನಾಥರನ್ನಾಗಿಸಿದೆ.

ಹೌದು, ವಿದ್ಯುತ್ ಉತ್ಪಾದನೆ ಸಲುವಾಗಿ ಲಿಂಗನಮಕ್ಕಿ ಜಲಾಶಯ ನಿರ್ಮಾಣದ ವೇಳೆ ಶಿವಮೊಗ್ಗದ ಸಾಗರ, ಹೊಸನಗರ ತಾಲೂಕಿನ 166 ಗ್ರಾಮಗಳ 6,177 ಕುಟುಂಬಗಳನ್ನು ಎತ್ತಂಗಡಿ ಮಾಡಲಾಗಿತ್ತು. ಅಂದಿನ‌ ರಾಜ್ಯ ಸರ್ಕಾರ 1962 ರಲ್ಲಿಯೇ ಪುನರ್ವಸತಿಗಾಗಿ ಅರಣ್ಯ ಭೂಮಿಯನ್ನ ಮಂಜೂರು ಮಾಡಿ ಆದೇಶಿಸಿತ್ತು. 1959 ರಿಂದ 1964ರ ಅವಧಿಯಲ್ಲಿ ಅರಣ್ಯ ಇಲಾಖೆ ಶಿವಮೊಗ್ಗ ಜಿಲ್ಲೆಯ ಒಟ್ಟು 13,500 ಎಕರೆ ಭೂಮಿಯನ್ನು ಪುನರ್ವಸತಿಗಾಗಿ ಬಿಡುಗಡೆ ಮಾಡಿತ್ತು. ಆದರೆ, ಅಂದಿನಿಂದ ಈವರೆಗೆ ಕಂದಾಯ ಇಲಾಖೆ ಅಧಿಕಾರಿಗಳು ಭೂಮಿ ಹಕ್ಕು ದಾಖಲೆಗಳಲ್ಲಿ ಬದಲಾವಣೆ ಮಾಡದ ಪರಿಣಾಮ‌ ಆ ದಾಖಲಾತಿಗಳಲ್ಲಿ ಆ ಭೂಮಿ ಅರಣ್ಯ ಪ್ರದೇಶವೆಂದೇ ನಮೂದಿಸಲಾಗಿದೆ. 1980 ರಲ್ಲಿ ಅರಣ್ಯ ರಕ್ಷಣೆ ಕಾಯ್ದೆ ಜಾರಿಗೆ ಬಂದ ಪರಿಣಾಮ ಆ ಭೂಮಿ ಹಂಚಿಕೆ ನೆನಗುದಿಗೆ ಬಿದ್ದಿದ್ದು, ಈ ಕುಟುಂಬಗಳಿಗೆ ಈವರೆಗೆ ಭೂಮಿ ಮಂಜೂರಾತಿ ಆಗಿಲ್ಲ. ಶಿವಮೊಗ್ಗದ ಸಾಗರ, ತೀರ್ಥಹಳ್ಳಿ, ಹೊಸನಗರ, ಶಿವಮೊಗ್ಗ, ಶಿಕಾರಿಪುರ ತಾಲೂಕುಗಳಲ್ಲಿ ಸರ್ಕಾರ ನೀಡಿದ ಭೂಮಿಯಲ್ಲಿ ನೆಲೆಕಂಡುಕೊಂಡಿರುವ 6 ಸಾವಿರಕ್ಕೂ ಹೆಚ್ಚು ಕುಟುಂಬಗಳು ಕಳೆದ ಆರು ದಶಕದಿಂದಲೂ ಭೂಮಿ ಹಕ್ಕಿಗಾಗಿ ಹೋರಾಟ ನಡೆಸುತ್ತಲೇ ಇವೆ.

ಈ ಹಿಂದಿನ ಕಾಂಗ್ರೆಸ್ ಸರ್ಕಾರ ಶರಾವತಿ ಮುಳುಗಡೆ ಸಂತ್ರಸ್ತರ ಒತ್ತಡಕ್ಕೆ ಮಣಿದು 2015 ರಿಂದ 2017ರ ಅವಧಿಯಲ್ಲಿ 9,932 ಎಕರೆ ಪ್ರದೇಶವನ್ನ ಡಿನೋಟಿಫಿಕೇಷನ್ ಮಾಡಿತ್ತು. ಇದರಲ್ಲಿ 2 ಸಾವಿರ ಎಕರೆ ಭೂಮಿಗೆ ಸಾಗುವಳಿ ಚೀಟಿ ನೀಡಲಾಗಿದೆ. ಉಳಿದಂತೆ ಸರ್ವೇ, ಹಕ್ಕುಪತ್ರ ವಿತರಣೆ ಸಂಬಂಧ ಕೆಲಸ ನಡೆಯುತ್ತಿತ್ತು. ಆದರೆ,1980ರ ಅರಣ್ಯ ಸಂರಕ್ಷಣಾ ಕಾಯ್ದೆ ಉಲ್ಲಂಘಿಸಿ ಶರಾವತಿ ಸಂತ್ರಸ್ತರಿಗೆ ಭೂಮಿ ಹಂಚಿಕೆ ಮಾಡಲಾಗಿದೆ. ಅಲ್ಲದೇ, ಸರ್ಕಾರದ ಈ ನಡೆಯಿಂದ ಪರಿಸರ ಹಾನಿಯಾಗುತ್ತದೆ ಮತ್ತು ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಕ್ಕೆ ಬಳಸುವಾಗ ಕೇಂದ್ರ ಸರ್ಕಾರದ ಅನುಮತಿ ಪಡೆಯಬೇಕು ಎಂದು ಖಾಸಗಿ ವ್ಯಕ್ತಿಯೊಬ್ಬರು ಹೈಕೋರ್ಟ್‌ ಮೊರೆ ಹೋಗಿದ್ದರು. ಆ ಹಿನ್ನೆಲೆಯಲ್ಲಿ ವಾದ – ಪ್ರತಿವಾದ ಆಲಿಸಿದ ಹೈಕೋರ್ಟ್‌, ಡಿನೋಟಿಫಿಕೇಷನ್ ಮಾಡುವಾಗ ಅರಣ್ಯ ಕಾಯ್ದೆ ಉಲ್ಲಂಘಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿ, 2015 ರಿಂದ 2017ರ ನಡುವಿನ ಡಿನೋಟಿಫಿಕೇಷನ್ ಅಲ್ಲದೇ, 1994, 2006, 2019ರ ಅವಧಿಯಲ್ಲಿ ಮಾಡಲಾಗಿದ್ದ ಆದೇಶಗಳನ್ನು ರದ್ದುಪಡಿಸಿ 2021ರ ಮಾರ್ಚ್‌ 4ರಂದು ಆದೇಶಿಸಿತ್ತು.

ಹೈಕೋರ್ಟ್ ಆದೇಶ ಪಾಲನೆ ಭಾಗವಾಗಿ ಕಳೆದ ಸೆಪ್ಟೆಂಬರ್‌ 28 ರಂದು 56 ಡಿನೋಟಿಫಿಕೇಷನ್ ಆದೇಶಗಳನ್ನು ರದ್ದುಪಡಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಮತ್ತೊಮ್ಮೆ ಶರಾವತಿ ಸಂತ್ರಸ್ತರು ಅತಂತ್ರರಾಗಿದ್ದಾರೆ. ಹೀಗಾಗಿಯೇ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಾನೂನು ಹೋರಾಟದ ಜೊತೆಗೆ ಮುಂದಿನ‌ ದಿನಗಳಲ್ಲಿ ಚುನಾವಣಾ ಬಹಿಷ್ಕಾರ ಹಾಕುತ್ತೇವೆ ಎಂದು ಎಚ್ಚರಿಸಿದ್ದಾರೆ.

ಒಟ್ಟಾರೆ, ಆರು ದಶಕಗಳ ಸಮಸ್ಯೆಗೆ ಅಂತ್ಯ ಹಾಡಬೇಕಾದ ಸರ್ಕಾರ ಮತ್ತೊಮ್ಮೆ ವಿಫಲವಾಗಿದೆ. ನ್ಯಾಯಾಲಯಕ್ಕೆ ಶರಾವತಿ ಸಂತ್ರಸ್ತರ ನೈಜ ಪರಿಸ್ಥಿತಿ ಮತ್ತು ಆ ಭೂಮಿಯನ್ನು 1980ರ ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಮುನ್ನವೇ ಅರಣ್ಯದಿಂದ ಬಿಡುಗಡೆ ಮಾಡಲಾಗಿತ್ತು ಎಂಬ ಅಂಶವನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡುವಲ್ಲಿ ವಿಫಲವಾಗಿದೆ. ರಾಜ್ಯ ಸರ್ಕಾರದ ಈ ಲೋಪದಿಂದಾಗಿ ಸಂತ್ರಸ್ತರ ಬದುಕು ಅತಂತ್ರವಾಗಿರುವುದು ನಿಜಕ್ಕೂ ದುರಂತವೇ ಸರಿ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

3 hours ago

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

16 hours ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

18 hours ago

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

18 hours ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

18 hours ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

2 days ago