ನವೆಂಬರ 6ರಂದು ಮಳಲಿ ಮಠದಲ್ಲಿ ಕಾರ್ತಿಕ ದೀಪೋತ್ಸವ ಮತ್ತು ಜನಜಾಗೃತಿ ಧರ್ಮ ಸಮಾರಂಭ|ದೀಪೋತ್ಸವದ ಅಂಗವಾಗಿ ಭಕ್ತರಿಂದ ಮಠದ ಸ್ವಚ್ಚತಾ ಅಭಿಯಾನ|Malalimatt

ನವೆಂಬರ್ 6 ರ ಭಾನುವಾರದಂದು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಳಲಿ‌ಮಠ ಮಹಾಸಂಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಮತ್ತು ಜನ ಜಾಗೃತಿ ಧರ್ಮ ಸಮಾರಂಭ ನಡೆಯಲಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾ ಸ್ವಾಮಿಜಿಗಳು ತಿಳಿಸಿದರು.




ಈ ಸಂಧರ್ಭದಲ್ಲಿ ಮಾತನಾಡಿದ ಅವರು ಮಾನವ ಜೀವನದಲ್ಲಿ ಕತ್ತಲೆ ಬೆಳಕಿನಂತೆ ಸುಖ ದುಃಖಗಳು ಶಾಶ್ವತವಲ್ಲ. ಭೌತಿಕ ಬದುಕು ಸಮೃದ್ಧಗೊಂಡಂತೆ ಆಂತರಿಕ ಜೀವನ ಪರಿಶುದ್ಧಗೊಳ್ಳಲು ಆಧ್ಯಾತ್ಮದ ಬೆಳಕು ಮಾನವನಿಗೆ ಅನಿವಾರ್ಯವಾಗುತ್ತದೆ ಎಂದರು.


ನವೆಂಬರ್ 06 ಭಾನುವಾರದಂದು ರಂದು ನಡೆಯುವ ಕಾರ್ತೀಕ ದೀಪೋತ್ಸವ ಹಾಗೂ ಜನ ಜಾಗೃತಿ ಧರ್ಮ ಸಮಾರಂಭ ಪರಮಪೂಜ್ಯ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ ನಡೆಯುತಿದ್ದು,ಈ ಕಾರ್ಯಕ್ರಮಕ್ಕೆ ಸ್ವಾಮೀಜಿಗಳು, ಮಂತ್ರಿಗಳು,ಜನಪ್ರತಿನಿಧಿಗಳು ,ಸಾಹಿತಿಗಳು ಆಗಮಿಸುತಿದ್ದು ಸರ್ವರು ಈ ಕಾರ್ಯಕ್ರಮಕ್ಕೆ ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿದೆ ಎಂದರು.


ಕಾರ್ತಿಕ ದೀಪೋತ್ಸವದ ಅಂಗವಾಗಿ ಭಕ್ತರಿಂದ ಸ್ವಚ್ಚತಾ ಅಭಿಯಾನ

ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿಯವರ ಸಮ್ಮುಖದಲ್ಲಿ ಹಾಲುಗುಡ್ಡೆ,ಅಲುವಳ್ಳಿ,
ವೀರಕ್ತಮಠ,ಶಿವಳ್ಳಿಕೊಪ್ಪ,ಬೆಳಂದೂರು, ಕರಡಿಗಾ,ಕೊಳವಳ್ಳಿ,ಕಲ್ಲಳ್ಳಿ,ಮಳವಳ್ಳಿ,ಕಗ್ಗಲಿ,ಬಟ್ಟೆಮಲ್ಲಪ್ಪ ಗ್ರಾಮಗಳ ಭಕ್ತರು
ಪಾಲ್ಗೊಂಡು ಮಠದ ಅವರಣ ಸ್ವಚ್ಚಗೊಳಿಸಿ ಮತ್ತು ಮಠದ ಗೋಡೆಗೆ ಸುಣ್ಣ ಬಣ್ಣವನ್ನು ಮಾಡಿದರು.


ಈ ಸಂದರ್ಭದಲ್ಲಿ ಹೊಸನಗರ ತಾಲೂಕ್ ಜೆಡಿಎಸ್ ಅಧ್ಯಕ್ಷ  ಎನ್.ವರ್ತೇಶ್, ಕಗ್ಗಲಿ
ಪುಟ್ಟಸ್ವಾಮಿಗೌಡ,ಹೊಸಕೆರೆ ನಾಗರಾಜ್‌ಗೌಡರು, ಬೆನಕಪ್ಪಗೌಡಶಿವಳ್ಳಿಕೊಪ್ಪ,ಕಗ್ಗಲಿಪ್ರಕಾಶ್,ಶೇಖರಪ್ಪ ಬಟ್ಟೆಮಲ್ಲಪ್ಪ, ನಾಗರಾಜ್‌ಗೌಡರು
ಬಟ್ಟೆಮಲ್ಲಪ್ಪ,ಕರಿಬಸಪ್ಪ ಬೆಳಂದೂರು,ನಾಗಾರ್ಜುನಸ್ವಾಮಿವೀರಕ್ತಮಠ,ಸುಗಂಧರಾಜ್‌ ಮಳವಳ್ಳಿ,ಗುರುಪಾದಪ್ಪಗೌಡ ಅಮೃತ,ಪುಟ್ಟರಾಜ್
ಹಾಲುಗುಡ್ಡೆ,ಚಂದ್ರಶೇಖರ,ರುದ್ರಪ್ಪ,ಜಯದೇವಕಗ್ಗಲಿ,ಪ ್ರಕಾಶ ಅಲುವಳ್ಳಿ,ಗಂಗಾಧರಗೌಡ ಸೊನಲೆ,ಧರ್ಮಕ್ಷಪ್ಪಗೌಡ ಕರಡಿಗಾ,ರವಿಕೋಟೆಗದ್ದೆ,ವಿಶ್ವನಾಥ ಕಲ್ಲಳ್ಳಿ,ಯೋಗೇಂದ್ರಪ್ಪ
ಕುಕ್ಕಳಲೇ,ರಾಜು ಕಲ್ಲಳ್ಳಿ,ಇನ್ನಿತರರು ಪಾಲ್ಗೊಂಡಿದ್ದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

59 minutes ago

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

14 hours ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

16 hours ago

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

16 hours ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

16 hours ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

2 days ago