ಭಾರತ್ ಜೋಡೋ ಯಾತ್ರೆಗೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿಯ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಅಪಘಾತದಲ್ಲಿ ಮೃತಪಟ್ಟಿದ್ದರು.ಆ ಕಾರ್ಯಕರ್ತನ ಮನೆಗೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ, 10 ಲಕ್ಷ ನೆರವಿನ ಚೆಕ್ ವಿತರಿಸಿದರು.
ಭಾರತ್ ಜೋಡೋ ಯಾತ್ರೆ ವೇಳೆ ಹಿರಿಯೂರು ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತ್ಯಾಗರ್ತಿ ಹೋಬಳಿ ಹುತ್ತದಿಂಬ ಗ್ರಾಮದ ರಮೇಶ್ ಅವರ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಶುಕ್ರವಾರದ ಇಂದು ಭೇಟಿ ನೀಡಿದರು.
ಮೃತ ಕಾರ್ಯಕರ್ತ ರಮೇಶ್ ನಿಧನದಿಂದಾಗಿ ದುಖದಲ್ಲಿದ್ದಂತಹ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಅಲ್ಲದೇ ಮೃತ ಕಾಂಗ್ರೆಸ್ ಕಾರ್ಯಕರ್ತ ರಮೇಶ್ ಅವರ ಪತ್ನಿ ಜಯಮ್ಮ ಅವರಿಗೆ 10 ಲಕ್ಷ ರೂಪಾಯಿ ನೆರವಿನ ಚೆಕ್ ನೀಡಿದರು.
ಈ ವೇಳೆ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ, ಮಾಜಿ ಶಾಸಕರಾದ ಮಧು ಬಂಗಾರಪ್ಪ, ಬೇಳೂರು ಗೋಪಾಲಕೃಷ್ಣ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಮತ್ತಿತರರು ಉಪಸ್ಥಿತರಿದ್ದರು.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…