ಮಗುವಿನ ಪ್ರಥಮ ವರ್ಷದ ಹುಟ್ಟುಹಬ್ಬದ ದಿನವೇ ಆತ್ಮಹತ್ಯೆಗೆ ಶರಣಾದ ರಿಪ್ಪನ್‌ಪೇಟೆ ಮೂಲದ ಮಹಿಳೆ : ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೋಷಕರು|Ripponpet

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕಾರಗೋಡು ಗ್ರಾಮದ ಮಹಿಳೆ ಆಲಗೇರಿ ಮಂಡ್ರಿ ಸಮೀಪದ ಗಂಟಿನಕೊಪ್ಪ ಗ್ರಾಮದ ತನ್ನ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕಾರಗೋಡು ಗ್ರಾಮದ ಆಟೋ ಕೃಷ್ಣ ರವರ ಪುತ್ರಿ ಐಶ್ವರ್ಯ (22) ಮೃತಪಟ್ಟ ದುರ್ಧೈವಿಯಾಗಿದ್ದಾರೆ.


ರಿಪ್ಪನ್‌ಪೇಟೆ ಸಮೀಪದ ಕಾರಗೋಡು ಗ್ರಾಮದ ನಿವಾಸಿ ಆಟೋ ಕೃಷ್ಣ ರವರ ಪುತ್ರಿ ಐಶ್ವರ್ಯ ವಿವಾಹ ಎರಡು ವರ್ಷಗಳ ಹಿಂದೆ ಆಲಗೇರಿ ಮಂಡ್ರಿ ಸಮೀಪದ ಗಂಟಿನಕೊಪ್ಪ ಗ್ರಾಮದ ಚಂದ್ರಶೇಖರ್ ಎಂಬುವವರ ಜೊತೆ ನಡೆದಿತ್ತು.

ಮೃತ ಮಹಿಳೆಯ ಮಗುವಿನ ಮೊದಲ ವರ್ಷದ ಹುಟ್ಟುಹಬ್ಬದ ದಿನದಂದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ :

ಐಶ್ವರ್ಯ  ಪತಿ ಚಂದ್ರಶೇಖರ್ ಮಧ್ಯವ್ಯಸನಿಯಾಗಿದ್ದು ಕುಡಿದ ಮತ್ತಿನಲ್ಲಿ ಪತ್ನಿ ಜತೆ ವಿಪರೀತ ಜಗಳ ಮಾಡುತಿದ್ದ, ಗಲಾಟೆ ವಿಕೋಪಕ್ಕೆ ತಿರುಗಿ ಪರಿಣಾಮ ಐಶ್ವರ್ಯ ಸಾವನ್ನಪ್ಪಿರುವ ಬಗ್ಗೆ ಅನುಮಾನವಿದೆ ಎಂದು ಮೃತಳ ತಂದೆ ಸಾಗರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.


ಪ್ರೀತಿಸಿ ಮದುವೆಯಾಗಿದ್ದ ಐಶ್ವರ್ಯ:

ಕಾರಗೋಡು ಗ್ರಾಮದ ಐಶ್ವರ್ಯ ಹಾಗೂ ಆಲಗೇರಿ ಮಂಡ್ರಿ ಸಮೀಪದ ಗಂಟಿನಕೊಪ್ಪ ಗ್ರಾಮದ ಚಂದ್ರಶೇಖರ್ ಕಳೆದ ಎರಡು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ!

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…

9 hours ago

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…

21 hours ago

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…

21 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು Renukaswamy murder case takes…

22 hours ago

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ KSRTC bus travelling from Udupi to…

22 hours ago

ಅಂಗನವಾಡಿ ಸಿಬ್ಬಂದಿಗೆ ಕನಿಷ್ಠ ವೇತನ ಜಾರಿಗೆ ಆಗ್ರಹ: ಜಿಲ್ಲಾಧಿಕಾರಿಗೆ 24 ಬೇಡಿಕೆಗಳ ಮನವಿ

ಅಂಗನವಾಡಿ ಸಿಬ್ಬಂದಿಗೆ ಕನಿಷ್ಠ ವೇತನ ಜಾರಿಗೆ ಆಗ್ರಹ: ಜಿಲ್ಲಾಧಿಕಾರಿಗೆ 24 ಬೇಡಿಕೆಗಳ ಮನವಿ Anganwadi workers in Shivamogga demand…

22 hours ago