ರಿಪ್ಪನ್‌ಪೇಟೆ : ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ|tammadikoppa

ರಿಪ್ಪನ್‌ಪೇಟೆ;-ಅರಸಾಳು ಗ್ರಾಮ ಪಂಚಾಯಿತ್ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಹೊಟ್ಯಾಳಪುರದಲ್ಲಿ ಮಿನಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದು ಜಾಗ ಇಲ್ಲದೆ ಗ್ರಾಮಸ್ಥರು ಊರ ಬಳಿಯಲ್ಲಿನ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ತಾತ್ಕಾಲಿಕವಾಗಿ ಸೆಡ್ ನಿರ್ಮಿಸಿಲಾಗಿ ಅರಣ್ಯ ಇಲಾಖೆಯವರು ತೆರವುಗೊಳಿಸಲು ಮುಂದಾದಾಗ ಪ್ರತಿಭಟನೆ ನಡೆಸಲಾಗಿದ್ದು ಶಾಸಕರ ಗಮನಕ್ಕೆ ತರಲಾಗಿ ಭಾನುವಾರದಂದು ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಗ್ರಾಮಸ್ಥರ ಬೇಡಿಕೆಯಂತೆ ಕಟ್ಟಡ ನಿರ್ಮಾಣಕ್ಕೆ ಅನುವು ಮಾಡಿಕೊಡುವುದರೊಂದಿಗೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ 40* 50 ಅಳತೆಯ ಜಾಗ ಬಿಡುವಂತೆ ಸೂಚಸಿದರು.

ಈ ಸಂದರ್ಭದಲ್ಲಿ ತಾಲ್ಲೂಕ್ ಶಿಶು ಕಲ್ಯಾಣಾಭಿವೃದ್ದಿ ಇಲಾಖೆಯ ಅಧಿಕಾರಿ ಶಶಿರೇಖಾ, ಗ್ರಾ.ಪಂ.ಪಿಡಿಓ ಗಣೇಶ ಹೊಸನಗರ ತಾಲ್ಲೂಕ್ ಅಂಗನವಾಡಿ ಕಾರ್ಯಕತೆಯರ ಯುನಿಯನ್ ಅಧ್ಯಕ್ಷೆ ಶೀಲಾ ಗಂಗನಾಯ್ಕ್,ಅಂಗನವಾಡಿ ಮೇಲ್ವಿಚಾರಕಿ ವಿಜಯಮ್ಮ,ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ,ಆರ್.ಟಿ.ಗೋಪಾಲ ತಮ್ಮಡಿಕೊಪ್ಪ ಲೋಕೇಶ್,ಪಿ.ರಮೇಶ್,ಮೆಣಸೆ ಆನಂದ,ಇನ್ನಿತರ ಗ್ರಾಮಸ್ಥರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ…

1 hour ago

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi…

1 hour ago

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ Shikaripura MLA B.Y. Vijayendra…

2 hours ago

ಅರಸಾಳು ರೈಲ್ವೆ ನಿಲ್ದಾಣಕ್ಕೆ DRM ಭೇಟಿ: ಜ್ವಲಂತ ಸಮಸ್ಯೆಗಳು ಗಮನಕ್ಕೆ, ಪರಿಹಾರದ ಭರವಸೆ

ಅರಸಾಳು ರೈಲ್ವೆ ನಿಲ್ದಾಣಕ್ಕೆ DRM ಭೇಟಿ: ಜ್ವಲಂತ ಸಮಸ್ಯೆಗಳು ಗಮನಕ್ಕೆ, ಪರಿಹಾರದ ಭರವಸೆ Mysuru DRM Mudit Mittal inspected…

2 hours ago

ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ.

ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ…

5 hours ago

ರಮ್-ವಿಸ್ಕಿ ಪ್ರಿಯರೇ ಗಮನಿಸಿ: ಕೃತಕ ಫ್ಲೇವರ್‌ ಬಳಕೆ ಆರೋಪ, FSSAI ಕಠಿಣ ಕ್ರಮ – ಯಾವೆಲ್ಲಾ ಬ್ರ್ಯಾಂಡ್ ಮೇಲೆ ಕ್ರಮ!!?? ಈ ಸುದ್ದಿ ನೋಡಿ

ರಮ್-ವಿಸ್ಕಿ ಪ್ರಿಯರೇ ಗಮನಿಸಿ: ಕೃತಕ ಫ್ಲೇವರ್‌ ಬಳಕೆ ಆರೋಪ, FSSAI ಕಠಿಣ ಕ್ರಮ - ಯಾವೆಲ್ಲಾ ಬ್ರ್ಯಾಂಡ್ ಮೇಲೆ ಕ್ರಮ!!??…

7 hours ago