ರಿಪ್ಪನ್‌ಪೇಟೆ : ಪತ್ರಕರ್ತ ಬಿ ಡಿ ರವಿಕುಮಾರ್ ಮೇಲೆ ಹಲ್ಲೆ ನಡೆಸಿದವರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ಮನವಿ|Ripponpet

ರಿಪ್ಪನ್‌ಪೇಟೆ : ಸಾಗರ ತಾಲೂಕಿನ ಆನಂದಪುರದ ಹೊಸದಿಗಂತ ಪತ್ರಿಕೆಯ ವರದಿಗಾರ  ಬಿ ಡಿ ರವಿಕುಮಾರ್ ರವರ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಗುರುವಾರ ಪಟ್ಟಣದ ಪತ್ರಕರ್ತ ಸಂಘಟನೆಗಳಿಂದ ಉಪವಿಭಾಗದಿಕಾರಿಗಳಿಗೆ ಗ್ರಾಮಲೆಕ್ಕಾಧಿಕಾರಿ ಜಾಕೀರ್ ಹುಸೇನ್ ಮೂಲಕ ಮನವಿ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ತ ಮ ನರಸಿಂಹ 19/10/2022 ರಂದು ಸಂಜೆ 4 ಗಂಟೆಗೆ ಹೊಸದಿಗಂತ ಪತ್ರಿಕೆ ವರದಿಗಾರರಾದ ಬಿ.ಡಿ ರವಿಕುಮಾರ್ ಅವರು ಸಾಗರ ತಾಲ್ಲೂಕಿನ ಆನಂದಪುರಂ ಬಳಿಯ ಕೆ. ಹೊಸಕೊಪ್ಪದಲ್ಲಿ ಕಲ್ಲು ಗಣಿಗಾರಿಕೆಯಿಂದ ಆಗುತ್ತಿರುವ ದುಷ್ಪರಿಣಾಮ ಮತ್ತು ರಸ್ತೆ ಹಾಳಾಗುತ್ತಿರುವ ಬಗ್ಗೆ ಗ್ರಾಮಸ್ಥರ ದೂರಿನ ಮೇರೆಗೆ ವರದಿಗಾಗಿ ತೆರಳಿದ್ದ ಸಂಧರ್ಭದಲ್ಲಿ ಪತ್ರಕರ್ತ ಬಿ.ಡಿ ರವಿಕುಮಾರ್‌ ಅವರು ಗ್ರಾಮಸ್ಥರ ಅಹವಾಲುಗಳನ್ನು ಆಲಿಸುತ್ತಿದ್ದ ಸಂದರ್ಭದಲ್ಲಿ ಸ್ಥಳಕ್ಕೆ ಕಲ್ಲುಗಣಿಗಾರಿಕೆಯ ಬಸವರಾಜು ಎಂಬ ವ್ಯಕ್ತಿ ತನ್ನ ಸಹಚರದೊಂದಿಗೆ ಆಗಮಿಸಿ ಪತ್ರಕರ್ತ ರವಿಕುಮಾರ್ ಅವರನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿರುತ್ತಾನೆ. ಇಲ್ಲಿಗೆ ಬಂದು ಯಾವ ಪತ್ರಕರ್ತರು ವರದಿ ಮಾಡಬಾರದು ಎಂದು ಬೆದರಿಕೆ ಹಾಕಿದ್ದಲ್ಲದೆ, ಕೊಲೆ ಮಾಡುವುದಾಗಿಯೂ ಜೀವಬೆದರಿಕೆ ಹಾಕಿರುತ್ತಾರೆ.

ಪತ್ರಕರ್ತ ಬಿ.ಡಿ ರವಿಕುಮಾರ್ ಅವರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಬಸವರಾಜು ಮತ್ತಿತರರನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನುಕ್ರಮ ಕೈಗೊಳ್ಳಬೇಕೆಂದು ಸಂಘವು ಆಗ್ರಹಿಸುತ್ತದೆ ಎಂದರು.
ಈ ಸಂಧರ್ಭದಲ್ಲಿ ಪತ್ರಕರ್ತರುಗಳಾದ ರಿ ರಾ ರವಿಶಂಕರ್ ,ಚಿದಾನಂದ ಸ್ವಾಮಿ ,ಪರಶುರಾಮ್ ,ಸೆಬಾಸ್ಟಿಯನ್ ಮ್ಯಾಥ್ಯೂಸ್ ,ಸುಧೀಂದ್ರ ಹೆಬ್ಬಾರ್ ,ರಫ಼ಿ ರಿಪ್ಪನ್‌ಪೇಟೆ ,ಪಿಯೂಸ್ ರೋಡ್ರಿಗಸ್ ಮತ್ತು ದೇವರಾಜ್ ಆರಗ ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

3 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

16 hours ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

18 hours ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

19 hours ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

19 hours ago

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

1 day ago