ರಿಪ್ಪನ್ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಮಾಜಿ ಅಧ್ಯಕ್ಷ ನಿತ್ಯಾನಂದ ಹೆಗಡೆ ರವರ ಅಕಾಲಿಕ ಸಾವು ನಮಗೆಲ್ಲಾ ಅತ್ಯಂತ ನೋವು ತಂದಿದೆ. ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೇ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು,ಪಟ್ಟಣದ ಹಲವಾರು ಸಂಘ ಸಂಸ್ಥೆಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದ ನಿತ್ಯಾನಂದ ಹೆಗಡೆ ರವರ ನಿಧನದ ಸುದ್ದಿ ನಮಗೆಲ್ಲರಿಗೂ ಆಘಾತವನ್ನುಂಟುಮಾಡಿದೆ ಎಂದು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಅಧ್ಯಕ್ಷ ವೈ ಜೆ ಕೃಷ್ಣ ಹೇಳಿದರು.
ಪಟ್ಟಣದ ಭೂಪಾಳಂ ಚಂದ್ರಶೇಖರ್ ಸಭಾಂಗಣದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಆಯೋಜಿಸಿದ್ದ ಇತ್ತೀಚೆಗಷ್ಟೆ ಅನಾರೋಗ್ಯದಿಂದ ಅಗಲಿದ ನಿತ್ಯಾನಂದ ಹೆಗಡೆ ರವರ ಶ್ರದ್ದಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು.
ಈ ಸಂಧರ್ಭದಲ್ಲಿ ಮೃತ ನಿತ್ಯಾನಂದ ಹೆಗಡೆ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಹಿಂದೂ ಮಹಾಸಭಾ ಮುಖಂಡರುಗಳಾದ ಎಂ ಬಿ ಮಂಜುನಾಥ್, ಸುರೇಶ್ ಸಿಂಗ್ , ಸುಧೀಂದ್ರ ಪೂಜಾರಿ ,ಸುಧೀರ್ ಪಿ, ಭಾಸ್ಕರ್ , ಕೆ ದೇವರಾಜ್ ಕೆರೆಹಳ್ಳಿ, ಆರ್ ರಾಘವೇಂದ್ರ ,ವಾಸಣ್ಣ, ದಾನಪ್ಪ ,ಶ್ರೀನಿವಾಸ್ ಆರ್ ಆಚಾರ್ ,ಉಮೇಶ್, ಭೀಮರಾಜ್,ನಾಗರಾಜ್,ಮಳಕೊಪ್ಪ ಈಶ್ವರ್,ರಾಘವೇಂದ್ರ ಹಾಗೂ ಇನ್ನಿತರರಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್