ರೌಡಿಸಂ ಮತ್ತು ಗಾಂಜಾ ದಂಧೆಕೋರರಿಗೆ ನೂತನ ಎಸ್ಪಿ ಮಿಥುನ್ ಕುಮಾರ್ ಖಡಕ್ ವಾರ್ನಿಂಗ್ |sp

ರೌಡಿಸಂ, ಗಾಂಜಾ ಮಾರಾಟವನ್ನು ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ’ ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಶೀಘ್ರ ಸಾರ್ವಜನಿಕರೊಂದಿಗೆ ಸಂವಹನ ನಡೆಸಿ ಇಲ್ಲಿನ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವುಗಳಿಗೆ ಪರಿಹಾರ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ.

ಅಪರಾಧ ಚಟುವಟಿಕೆ ಕಂಡು ಬಂದಲ್ಲಿ ಇಲ್ಲವೇ ಮಾಹಿತಿ ಇದ್ದಲ್ಲಿ ಮಾಧ್ಯಮದವರು ಹಾಗೂ ಸಾರ್ವಜನಿಕರು ನೇರವಾಗಿ ನಮಗೆ ಮಾಹಿತಿ ಕೊಡಬಹುದು’ ಎಂದು ತಿಳಿಸಿದರು.

ಕೋಮುಗಲಭೆ, ರೌಡಿ ಚಟುವಟಿಕೆ ಹಾಗೂ ಗಾಂಜಾ ಮಾರಾಟ ಶಿವಮೊಗ್ಗ ನಗರ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳು ಎಂಬುದಕ್ಕೆ ಪ್ರತಿಕ್ರಿಯಿಸಿದ ಮಿಥುನ್‌ಕುಮಾರ್, ‘ಕೋಮು ಗಲಭೆ ವಿಚಾರದಲ್ಲಿ ನನ್ನದು ಭಿನ್ನ ನಿಲುವು. ಎಲ್ಲ ಕೋನಗಳಿಂದಲೂ ನೋಡಿ ಇನ್ನಷ್ಟು ಅರ್ಥಮಾಡಿಕೊಂಡು ಆ ಬಗ್ಗೆ ಕ್ರಮಗಳಿಗೆ ಮುಂದಾಗುವೆ’ ಎಂದರು.

ನಗರದಲ್ಲಿ ಸಂಚಾರದಟ್ಟಣೆ ಸಮಸ್ಯೆಯ ಬಗ್ಗೆ ಜನರಿಂದಲೂ ಕೇಳಿದ್ದೇನೆ. ನಗರ ದೊಡ್ಡದಾಗಿ ಬೆಳೆದಿದೆ. ವಾಹನಗಳ ಸಂಖ್ಯೆ ಹೆಚ್ಚಳಗೊಂಡಿದೆ. ಹೀಗಾಗಿ ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ. ಅದನ್ನು ಸರಿಪಡಿಸಲಾಗುವುದು. ಆಟೊ ಮೀಟರ್‌ ಅಳವಡಿಕೆ, ಪ್ರೀ ಪೇಯ್ಡ್ ಆಟೊ ವ್ಯವಸ್ಥೆ ಆರಂಭಕ್ಕೆ ಸಂಬಂಧಿಸಿ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಎಸ್‌ಪಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಮಾಧ್ಯಮಗಳಿಗೆ ಸಂಬಂಧ ವಿಲ್ಲದವರು ‘ಪ್ರೆಸ್’ ಎಂಬ ಸ್ಟಿಕ್ಕರ್ ಬಳಸಿಕೊಂಡು ಓಡಾಡುತ್ತಿರುವ ಬಗ್ಗೆ ಗಮನ ಸೆಳೆದಾಗ ಅದರ ನಿಯಂತ್ರಣಕ್ಕೆ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂ‍ಪರ್ಕಾಧಿಕಾರಿಯಿಂದ ನೈಜ ಪತ್ರಕರ್ತರ ಬಗ್ಗೆ ಮಾಹಿತಿ ಪಡೆದು ಅದರ ‘ಪ್ರೆಸ್’ ಪದ ದುರುಪಯೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ನಗರದಲ್ಲಿ ಗೂಡಂಗಡಿಗಳಲ್ಲೂ ಓಸಿ ಜೂಜಾಟ ಅವ್ಯಾವಹತವಾಗಿ ನಡೆಯುತ್ತಿದೆ. ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣವಿಲ್ಲದಾಗಿದೆ ಎಂದು ಮಾಧ್ಯಮದವರು ಗಮನ ಸೆಳೆದಾಗ ಆ ಬಗ್ಗೆ ನಿಶ್ಚಿತವಾಗಿ ಕ್ರಮ ಕೈಗೊಳ್ಳುವೆ ಎಂದು ಹೇಳಿದರು.

ಹದಿಹರೆಯದವರು ಪರವಾನಗಿ ಇಲ್ಲದೇ ವಾಹನ ಚಲಾಯಿಸುವುದನ್ನು ತಡೆದು ಅಪಘಾತಗಳನ್ನು ತಪ್ಪಿಸಿ, ಜೀವ ಹಾನಿ ತಡೆಯುವುದು ತಮ್ಮ ಆದ್ಯತೆಯ ಸಂಗತಿ ಎಂದರು.

ಸುದ್ದಿಗೋಷ್ಠಿಯಲ್ಲಿ ಎಎಸ್‌ಪಿ ವಿಕ್ರಂ ಅವಟೆ, ಡಿವೈಎಸ್‌ಪಿ ಬಾಲರಾಜ್ ಇದ್ದರು.

ಐಪಿಎಸ್‌ಗೆ ಮುನ್ನ ಸಾಫ್ಟ್‌ವೇರ್ ಎಂಜಿನಿಯರ್‌

ತುಮಕೂರು ಜಿಲ್ಲೆಯ ಕೊರಟಗೆರೆ ನಮ್ಮೂರು. ತುಮಕೂರಿನಲ್ಲಿ ಶಿಕ್ಷಣ ಮುಗಿಸಿ ಎಂಜಿನಿಯರಿಂಗ್ ಓದಿದ್ದೇನೆ. ನಾಲ್ಕು ವರ್ಷ ಸಾಫ್ಟ್‌ವೇರ್ ಕಂಪನಿಯಲ್ಲೂ ಕೆಲಸ ಮಾಡಿದ್ದು, ನಾಗರಿಕ ಸೇವೆ ಪರೀಕ್ಷೆ ಬರೆದು 2016ರಲ್ಲಿ ಐಪಿಎಸ್‌ ಅಧಿಕಾರಿಯಾಗಿ ಆಯ್ಕೆಯಾಗಿದ್ದೇನೆ ಎಂದು ಮಿಥುನ್‌ಕುಮಾರ್ ತಮ್ಮ ಪರಿಚಯ ಮಾಡಿಕೊಂಡರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago