ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ಶಾಸಕ ಆನಂದ್ ಮಾಮನಿ ನಿಧನ|Bangalore

ವಿಧಾನಸಭೆಯ ಉಪಸಭಾಧ್ಯಕ್ಷ ಹಾಗೂ ಬೆಳಗಾವಿ ಜಿಲ್ಲೆ ಸವದತ್ತಿ ಕ್ಷೇತ್ರದ ಶಾಸಕರೂ ಆಗಿದ್ದ ಆನಂದ್ ಚಂದ್ರಶೇಖರ್ ಮಾಮನಿ (56) ಅವರು ತಡರಾತ್ರಿ ನಿಧನರಾಗಿದ್ದಾರೆ.

ತೀವ್ರ ಸ್ವರೂಪದ ಅನಾರೋಗ್ಯದ ಹಿನ್ನೆಲೆಯಲ್ಲಿ ಎರಡು ತಿಂಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು.

ಉಪಸಭಾಪತಿಯಾಗಿದ್ದ ವೇಳೆ ಅವರು ಕಲಾಪದಲ್ಲಿ ಸದನವನ್ನು ನಿರ್ವಹಿಸುತ್ತಿದ್ದ ರೀತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭೆ ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಮಾದರಿ ಜನಪ್ರತಿನಿಧಿಯಾಗಿ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಕೇವಲ ರಾಜಕೀಯ ಕ್ಷೇತ್ರವಲ್ಲದೆ, ಆನಂದ್ ಮಾಮಿನಿ ಅವರು ಅನೇಕ ಸಮಾಜ ಸೇವೆಯಲ್ಲಿಯೂ ತೊಡಗಿಸಿಕಡಿದ್ದರು. ಶ್ರೀ ಚಂದ್ರಮ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಸವದತ್ತಿ ಅಧ್ಯಕ್ಷರಾಗಿದ್ದರು.
2000 ರಿಂದ 2002ರ ವರೆಗೆ ಪ್ರಾಥಮಿಕ ಸರಕಾರಿ ಕೃಷಿ ಮತ್ತು ಅಭಿವೃದ್ಧಿ ಬ್ಯಾಂಕ್, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ, ಯಲ್ಲಮ್ಮನಗುಡ್ಡ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಎಜುಕೇಶನ್ ಸೊಸೈಟಿ, ಸೌದತ್ತಿಯ ಸದಸ್ಯರಾಗಿ‌ ಕಾರ್ಯನಿರ್ವಹಿಸಿದ್ದರು.

2008 ರಲ್ಲಿ ಬಿಜೆಪಿ ಪಕ್ಷದಿಂದ ಮೊದಲ ಬಾರಿಗೆ ಸವದತ್ತಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. 2013-2018 ರಲ್ಲಿ ಎರಡನೇ ಬಾರಿಗೆ ಬಿಜೆಪಿಯಿಂದ ವಿಧಾನಸಭೆಗೆ ಸ್ಪರ್ಧಿಸಿ ಜಯಗಳಿಸಿ, 2018 ರಲ್ಲಿ ಮೂರನೇ ಬಾರಿಗೆ ಹ್ಯಾಟ್ರಿಕ್​ ವಿಜಯ ಸಾಧಿಸಿದರು. ಪ್ರಸ್ತುತ ವಿಧಾನಸಭಾ ಉಪಸಭಾಧ್ಯಕ್ಷರಾಗಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

3 hours ago

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

16 hours ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

18 hours ago

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

18 hours ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

18 hours ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

2 days ago