Categories: Blog

ಶಾಸಕ ಹರತಾಳು ಹಾಲಪ್ಪ ಕುಟುಂಬ ವರ್ಗದವರಿಂದ ಸಂಭ್ರಮದಿಂದ ಭೂಮಿ ಹುಣ್ಣಿಮೆ ಆಚರಣೆ

ರಿಪ್ಪನ್ ಪೇಟೆ :  ಹರತಾಳು ಗ್ರಾಮದಲ್ಲಿ ಸಾಗರ- ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂ ಎಸ್ ಐ ಎಲ್ ಅಧ್ಯಕ್ಷ ಹರತಾಳು ಹಾಲಪ್ಪರವರು ತಮ್ಮ ಕುಟುಂಬ ವರ್ಗದವರು, ಬಿಜೆಪಿ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಭೂಮಿ ಹುಣ್ಣಿಮೆಯ ಹಬ್ಬವನ್ನು ತಮ್ಮ ಹೊಲದಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು.


ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ, ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಸಮಯ ಇದಾಗಿದ್ದು, ಭೂ ತಾಯಿ ಗರ್ಭಿಣಿಯೆಂಬ ನಂಬಿಕೆಯಿಂದ ಅವಳ ಬಯಕೆಗೆ ಅನುಗುಣವಾಗಿ ಉಡಿ ತುಂಬುತ್ತಾರೆ. ಭೂಮಿ ಹುಣ್ಣಿಮೆ ಮಲೆನಾಡಿನ ರೈತರ ಪಾಲಿಗೆ ಸಂಭ್ರಮದ ಹಬ್ಬ. ಶಿವಮೊಗ್ಗ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಲ್ಲಿ ಭೂಮಿ ಹುಣ್ಣಿಮೆ ಹಬ್ಬ ಹೆಚ್ಚು ಪ್ರಚಲಿತದಲ್ಲಿದೆ. ಅದರಲ್ಲೂ ಶಿವಮೊಗ್ಗ ಜಿಲ್ಲೆಯಲ್ಲಿ ಈಡಿಗ (ದೀವರು) ಸಮುದಾಯದಲ್ಲಿ ಈ ಸಂಪ್ರದಾಯ ವಿಶಿಷ್ಟವಾಗ
ಬೇರೆ ಕಡೆಗಳಲ್ಲಿ ವಿಭಿನ್ನ ಹೆಸರುಗಳಿಂದ ಹಬ್ಬ ಆಚರಿಸಲ್ಪಡುತ್ತದೆ. ವರ್ಷವಿಡಿ ಭೂಮಿಯಲ್ಲಿ ಉತ್ತಿ ಬಿತ್ತಿ ಬೆಳೆದು ಅನ್ನದಾತ ಎನಿಸಿಕೊಂಡಿರುವ ರೈತನಿಗೆ ಭೂಮಿ ಬರೀ ಮಣ್ಣಲ್ಲ, ಭೂಮಿ ಫಲವತ್ತತೆಯ ಸಂಕೇತ.


ಭೂಮಿ ಹುಣ್ಣಿಮೆ ಸಂದರ್ಭದಲ್ಲಿ ಹೊಲ ಗದ್ದೆಗಳಲ್ಲಿ ಬಿತ್ತಿದ ಬೆಳೆಗಳು ತೆನೆಗಳಾಗಿ, ಕಾಳು ಗಟ್ಟಿಯಾಗುವ ಹಂತದಲ್ಲಿರುತ್ತದೆ, ಅಷ್ಟೇ ಅಲ್ಲದೆ ಅಡಿಕೆ, ತೆಂಗು, ಬಾಳೆ ಸೇರಿದಂತೆ ವಿವಿಧ ಬೆಳೆಗಳ ಫಸಲು ಚೆನ್ನಾಗಿ ಬಂದಿರುತ್ತದೆ. ಈ ಸಂದರ್ಭದಲ್ಲಿ ಭೂ ತಾಯಿ ಗರ್ಭಿಣಿ ಎಂಬ ನಂಬಿಕೆಯಲ್ಲಿ ರೈತಾಪಿ ವರ್ಗ ಪುರಾತನ ಕಾಲದಿಂದಲೂ ಭೂಮಿ ಹುಣ್ಣಿಮೆ ಹಬ್ಬವನ್ನು ಆಚರಿಸಿಕೊಂಡು ಬರುತ್ತಿದ್ದಾರೆ ಭೂಮಿ ತಾಯಿಗೆ ಅಂತಲೇ ಬಗೆ ಬಗೆಯ ಅಡುಗೆಗಳನ್ನು ಮಾಡುತ್ತಾರೆ. ಅವುಗಳನ್ನು ಚಿತ್ತಾರದಿಂದ ಕೂಡಿದ ಬೆತ್ತ ಅಥವಾ ಬಿದಿರಿನ ಬುಟ್ಟಿಯಲ್ಲಿ ಮನೆಯಿಂದ ತುಂಬಿಕೊಂಡು ಪೂಜೆ ಮಾಡುವ ಸ್ಥಳಕ್ಕೆ ಮನೆಯ ಯಜಮಾನ ತಲೆಯ ಮೇಲೆ ಹೊತ್ತು ಕೊಂಡೊಯ್ಯುವುದು ಸಂಪ್ರದಾಯ.

ಕೆಲವರು ಭತ್ತದ ಗದ್ದೆಯಲ್ಲಿ ಭತ್ತದ ಗಿಡಗಳಿಗೆ ಪೂಜೆ ಮಾಡಿದರೆ, ಅಡಿಕೆ ತೋಟ ಇರುವವರು ಅಡಿಕೆ ಮರಕ್ಕೆ ಸೀರೆಯನ್ನು ಉಡಿಸಿ, ಆಭರಣಗಳನ್ನು ಧರಿಸಿ ಶೃಂಗಾರ ಮಾಡಿರುತ್ತಾರೆ. ಕುಟುಂಬಸ್ಥರಲ್ಲೇ ಸೇರಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಬಳಿಕ ದೇವರುಗಳಿಗೆ ಹಾಗೂ ಭೂಮಿ ತಾಯಿಗೆ ಬಗೆ ಬಗೆಯ ಅಡುಗೆಗಳನ್ನು ನೈವೇದ್ಯ ಮಾಡಿ ಒಂದು ಎಡೆಯನ್ನು ಗದ್ದೆಯಲ್ಲಿ ಇಟ್ಟು, ಭೂಮಿ ತಾಯಿಯ ಬಳಿ ಉತ್ತಮ ಫಸಲನ್ನು ನೀಡಿ ನಮ್ಮ ಕುಟುಂಬಕ್ಕೆ ಒಳ್ಳೆಯದನ್ನು ಮಾಡಲಿ ಎಂದು ಬೇಡಿಕೊಳ್ಳುತ್ತಾರೆ ಎಂದರು.


ಆಧುನಿಕತೆಯಿಂದಾಗಿ ನಮ್ಮ ಅನೇಕ ಸಾಂಪ್ರದಾಯಿಕ ಆಚರಣೆಗಳು ಮೂಲೆಗೆ ಸರಿಯುತ್ತಿದ್ದರೂ ಭೂಮಿ ಹುಣ್ಣಿಮೆ ಹಬ್ಬದ ಆಚರಣೆಗಳು ಇಂದಿಗೂ ಚಾಲ್ತಿಯಲ್ಲಿವೆ. ಈ ಹಬ್ಬದ ಆಚರಣೆಗಳು ನಿಸರ್ಗಕ್ಕೆ ಹತ್ತಿರವಾದದ್ದು ಮತ್ತು ನಿಸರ್ಗದಲ್ಲೆ ದೇವರನ್ನು ಕಾಣುವುದು ನಮ್ಮ ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ ಎಂದರು.

ಮುಖಂಡರಾದ ಕಲ್ಯಾಣಪ್ಪ ಗೌಡ, ಉಸ್ಮಾನ್ ಸಾಬ್, ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಸದಸ್ಯರಾದ ಪಿ ರಮೇಶ್, ಕೆರೆಹಳ್ಳಿ ಸುಂದರೇಶ್, ಬಿಜೆಪಿ ಮುಖಂಡರುಗಳಾದ  ಮಂಡಾನೆ ಮೋಹನ್, ಹರತಾಳು ರಾಮಚಂದ್ರ, ಜಯಂತ್, ಹರತಾಳು ಗೋಪಾಲಕೃಷ್ಣ, ಉಮೇಶ್ ಜಾಗದ್ದೆ, ಸುಧೀರ್. ಪಿ. ಹಿರಿಯ ಪತ್ರಕರ್ತರಾದ ರಿ. ರಾ.ರವಿಶಂಕರ್,  ಬಸವ ರಾಜ್ ಇನ್ನಿತರರಿದ್ದರು.

ಸಂಪೂರ್ಣ ವಿಡಿಯೋ ಇಲ್ಲಿ ವೀಕ್ಷಿಸಿ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago